Categories: ಕೋಲಾರ

ವೆರ್ಗಾ ಕಂಪನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

 

ಕೋಲಾರ: ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿರುವುದನ್ನು ವಿರೋಧಿಸಿ, ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ನಗರದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಸುಮಾರು 2006 ರಲ್ಲಿ ಒಂದು ಸಣ್ಣ ಶೆಡ್‌ನಲ್ಲಿ ಆರಂಭವಾದ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕೈಗಾರಿಕೆಯು 2019 ರಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್‌ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್, ಮತ್ತು ಕಪ್ಲರ್ಸ್ 200 ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19 ರಲ್ಲಿ ವೆರ್ಗಾ 2, ವೆರ್ಗಾ 3 ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು. 2023 ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರುಗಳನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಹೆಸರು ಬದಲಾವಣೆ ಮಾಡಿದರು. ವೆರ್ಗಾ 1 ಘಟಕದಲ್ಲಿ 2019 ರಲ್ಲಿ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮೀಷಗಳನ್ನು ನೀಡಿ ಹಂತ ಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು

ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕವಾಗಿರುವ ಕೈಗಾರಿಕೆಯನ್ನು ನಷ್ಠ ಎಂದು ತೋರಿಸುತ್ತಿರುವುದು ಸ್ಪಷ್ಠವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. ಕಳೆದ 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು,

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲ್ಲೂಕು ಮುಖಂಡರಾದ, ಎಂ.ಭೀಮರಾಜ್, ಎನ್.ಎನ್.ಶ್ರೀರಾಮ್, ಎಸ್ ಆಶಾ, ವಿ.ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ.ವಿ.ಮಂಜುನಾಥ್, ಚಿನ್ನಮ್ಮ, ಡಿ.ಎಸ್.ವೆಂಕಟರವಣ ಮುಂತಾದವರು ಇದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

6 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

6 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

10 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

12 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

15 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

20 hours ago