ವೇಗದ ಸಂಚಾರಕ್ಕೆ ಕಡಿವಾಣ: 130 ಕಿ.ಮೀ ಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಆ.1ರಿಂದ ಎಫ್‌ಐಆರ್ ದಾಖಲು

130 ಕಿಲೋ ಮೀಟರ್ ಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಆಗಸ್ಟ್ 1ರಿಂದ ಎಫ್‌ಐಆರ್ ದಾಖಲಾಗಲಿದ್ದು, ರಾಜ್ಯಾದ್ಯಂತ ಈ ಕ್ರಮ ಜಾರಿಯಾಗಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ‘X’ ಖಾತೆಯಲ್ಲಿ ಸಂದೇಶ ಪೋಸ್ಟ್ ಅವರು ಮಾಡಿದ್ದಾರೆ, ‘ಸ್ಪಾಟ್ ವೇಗ ಮತ್ತು ವಿಭಾಗೀಯ ವೇಗ ಇದರ ಆಧಾರದ ಮೇಲೆ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು. ಅಂತಹ ಪ್ರಕರಣಗಳಲ್ಲಿ ₹ 2,000 ವರೆಗೆ ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗು ಸಾಧ್ಯತೆ ಇರುತ್ತದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುವ ಶೇ 90ರಷ್ಟು ಅಪಘಾತಗಳಿಗೆ ಅತಿ ವೇಗದ ಚಾಲನೆಯೇ ಕಾರಣ ಎಂಬುದು ಸರ್ಕಾರ ವಿವಿಧ ಇಲಾಖೆಗಳ ಮೂಲಕ ನಡೆಸಿದ ಸಮೀಕ್ಷೆಯಿಂದ ಗೊತ್ತಾಗಿದೆ.  ಇದಕ್ಕೆ ಕಡಿವಾಣ ಹಾಕಲು ಗಂಟೆಗೆ 130 ಕಿ.ಮೀ.ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ನಿರ್ಲಕ್ಷ್ಯದ ಚಾಲನೆ ಎಂದು ಪರಿಗಣಿಸಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

ಜುಲೈ 25 ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 155 ವಾಹನಗಳು ಗಂಟೆಗೆ 130 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಸಂಚರಿಸುತ್ತಿದ್ದವು. ಇದರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಸರ್ಕಾರಿ ವಾಹನಗಳು ಸೇರಿವೆ. ಕೆಲವು ವಾಹನಗಳು ಗಂಟೆಗೆ 159 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವುದನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಎಂದರು.

ಸದ್ಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹತ್ತು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರೆ ಭಾಗಗಳಲ್ಲಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

3 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

4 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

15 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago