ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ.
ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.
ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡುಬರುತ್ತಿವೆ. ಆದರೆ, ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.
ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…