ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು- ಸಿಎಂ ಸಿದ್ದರಾಮಯ್ಯ

“ಸಬ್ ಕಾ ಸಾಥ್-ಸಬ್ ಕಾ ವಿಕಾಸ್” ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು. ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದರು.

ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ಹೊರುವವರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ? ಇದಕ್ಕೆ ನಾರಾಯಣಗುರುಗಳು ಹೇಳಿದ ಮಾರ್ಗ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ ನಿಮ್ಮದೇ ದೇವಸ್ಥಾನ ನಿರ್ಮಿಸಿಕೊಳ್ಳಿ ಎಂದು ಹೇಳಿದರು.

ಯಾವ ಕೆಲಸವೂ ಮೇಲು ಅಲ್ಲ, ಕೀಳೂ ಅಲ್ಲ. ಈ ಕಾರಣಕ್ಕೇ ಕಾಯಕವೇ ಕೈಲಾಸ ಎಂದು ಶರಣರು ಹೇಳಿದ್ದಾರೆ. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು, ಅದನ್ನು ಎಲ್ಲರಿಗೂ ವಿತರಿಸಬೇಕು ಎನ್ನುವುದು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರಕಾರದ ಕಾರ್ಯಕ್ರಮಗಳೂ ಈ ಆಶಯಕ್ಕೆ ಪೂರಕವಾಗಿವೆ ಎಂದು ತಿಳಿಸಿದರು.

ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲಾ ಸಮುದಾಯಕ್ಕೆ ಸಿಕ್ಕರೆ ಮಾತ್ರ ಜಾತಿಗ್ರಸ್ಥ ಸಮಾಜ ಚಲನಶೀಲವಾಗುತ್ತದೆ. ಇಲ್ಲವಾದರೆ ಸ್ಥಗಿತಗೊಂಡ ಸಮಾಜ ಆಗುತ್ತದೆ. ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆ ಸೇರಿ ನನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶಾಸಕರಾದ ಎಂ.ಚಂದ್ರಪ್ಪ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

10 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

10 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

17 hours ago