ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ: ಜ.27-28ರವರೆಗೆ ನಮ್ಮ ನಡಿಗೆ ವಿಜ್ಞಾನದೆಡೆಗೆ ಕಾರ್ಯಕ್ರಮ

ವೈಜ್ಞಾನಿಕ ಚಿಂತಕ, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರ  ಜನ್ಮಶತಮಾನೋತ್ಸವದ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್)ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಜ.27ರಿಂದ ಆರಂಭವಾಗಲಿದ್ದು, ಜ.28ರಂದು ದೊಡ್ಡಬಳ್ಳಾಪುರ ತಲುಪಲಿದೆ. ವೈಜ್ಞಾನಿಕ ಜಾಗೃತಿಯ ಈ ಕಾರ್ಯಕ್ರಮದಲ್ಲಿ ಆಸಕ್ತರು ಭಾಗವಹಿಸಿ ವಿಜ್ಞಾನದ ವಿಚಾರಗಳನ್ನು ಪ್ರಚುರಪಡಿಸಲು ಕೈಜೋಡಿಸಬೇಕಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಈ.ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ವೈಜ್ಞಾನಿಕ ಚಿಂತಕ, ಶಿಕ್ಷಣತಜ್ಞ, ಸರಳತೆಗೆ ಹೆಸರಾಗಿದ್ದ ಡಾ ಹೆಚ್ ನರಸಿಂಹಯ್ಯ ಅವರು ತಮ್ಮ ಸ್ವಂತ ಪರಿಶ್ರಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾಗಿ, ನ್ಯಾಷನಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ದಕ್ಷತೆಯಿಂದ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಸದಾ ವೈಜ್ಞಾನಿಕ ಚಿಂತನೆ ರೂಢಿಸಿಕೊಂಡಿದ್ದ ಅವರ ಆಶಯಗಳನ್ನು ಸಾಕಾರಗೊಳಿಸಲು ಇಂದಿನ ಪೀಳಿಗೆಗೆ ಡಾ.ಹೆಚ್ ನರಸಿಂಹಯ್ಯನವರ ಚಿಂತನೆ, ಆದರ್ಶ, ವೈಜ್ಞಾನಿಕ ಮನೋಭಾವ, ಸರಳತೆ, ಬಹಳ ಮುಖ್ಯವಾಗಿ ಪ್ರಶ್ನಿಸುವ ಮನೋಭಾವ ಇವುಗಳನ್ನು ಇಂದಿನ ಜನಮಾನಸಕ್ಕೆ ಪರಿಚಯಿಸುವ ಅಗತ್ಯವಿದೆ. 2020ಕ್ಕೆ ಡಾ. ಎಚ್.ನರಸಿಂಹಯ್ಯ ಅವರು ಜನಿಸಿ ಒಂದು ಶತಮಾನವಾದ ಹಿನ್ನೆಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷವಾಗಿ ಅವರ ಭಾವಚಿತ್ರದ ಸಾವಿರಾರು ಪ್ರತಿ ಮಾಡಿಸಿ ಮನೆ ಮನೆಗಳಿಗೆ, ಶಾಲೆ ಕಾಲೇಜುಗಳಿಗೆ ತಲುಪಿಸಿ ಡಾ. ಹೆಚ್ ನರಸಿಂಹಯ್ಯ ಅವರ ಚಿಂತನೆಗಳನ್ನು ಹರಡುವ ಪ್ರಯತ್ನ ಮಾಡಲಾಗಿದೆ ಎಂದರು.

ವಿಜ್ಞಾನದೆಡೆಗೆ ನಮ್ಮ ನಡಿಗೆ :

 ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ  ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನೇತೃತ್ವದಲ್ಲಿ ವೈಜ್ಞಾನಿಕ ಚಿಂತನೆಗಾಗಿ ಬೆಂಗಳೂರಿನಿಂದ ಅವರ ಹುಟ್ಟೂರಾದ ಗೌರಿಬಿದನೂರು ತಾಲೂಕಿನ ಹೊಸೂರಿಗೆ ವಿಜ್ಞಾನದೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಬೆಂಗಳೂರಿನ ಬಸವನಗುಡಿ, ನ್ಯಾಷನಲ್ ಕಾಲೇಜಿನಲ್ಲಿ ಜ.27ರಂದು  ಆರಂಭವಾಗಲಿದ್ದು, ಜ.28ರಂದು ರಾಜಾನುಕುಂಟೆ, ಮಾರಸಂದ್ರ, ಬಾಶೆಟ್ಟಿಹಳ್ಳಿ ಮೂಲಕ ದೊಡ್ಡಬಳ್ಳಾಪುರಕ್ಕೆ ಆಗಮಿಸಲಿದ್ದು ರಾತ್ರಿ ತಂಗಲಿದೆ. ನಂತರ ಗೌರಿಬಿದನೂರು ಮಾರ್ಗವಾಗಿ ಹೊಸೂರು ತಲುಪಿ ಹೊಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿಸಿಕೊಂಡು ಡಾ. ಹೆಚ್.ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿದುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಬಹುದು. ಪಾದಯಾತ್ರೆಯ ಮಾರ್ಗದುದ್ದಕ್ಕೂ ವೈಜ್ಞಾನಿಕ ಚಿಂತನೆಗೆ ಸಂಬಂಸಿದ ಬೀದಿ ನಾಟಕ ಪ್ರದರ್ಶನ, ಪವಾಡ ರಹಸ್ಯ ಬಯಲು, ಚರ್ಚೆ, ಸಂವಾದ, ಕಡಿಮೆ ಬೆಲೆಯ ಪುಸ್ತಕಗಳ ಮಾರಾಟ, ಮಾರ್ಗದುದ್ದಕ್ಕೂ ಯಾತ್ರೆಯ ನೆನಪಿಗಾಗಿ 100 ಸಸಿಗಳನ್ನು ನೆಡುವುದು ಮುಂತಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಪಾದಯಾತ್ರೆಯಲ್ಲಿ ಆಸಕ್ತರು ಐದೂ ದಿನ ಅಥವಾ ತಮಗೆ ಅನುಕೂಲವಾದ ದಿನ ಭಾಗವಹಿಸಬಹುದಾಗಿದೆ ಎಂದು ಮನವಿ ಮಾಡಿದರು.

ಈ ವೇಳೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಎಂ.ಲಕ್ಷ್ಮಿನರಸಿಂಹ, ಗೋವಿಂದರಾಜ ನಗರ ಕ್ಷೇತ್ರದ ಅಧ್ಯಕ್ಷ ಬಾಲಾಜಿರಾವ್, ಬೆಂ.ಗ್ರಾ. ಜಿಲ್ಲಾ ಘಟಕದ ಅಧ್ಯಕ್ಷ ತೂಬಗೆರೆ ಷರೀಫ್ ಹಾಜರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago