ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ.90 ರಷ್ಟು ರೈತರು ಭೂಮಿ‌ ಕೊಡಲು ಒಪ್ಪುವುದಿಲ್ಲ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ

ರೈತರ ಫಲವತ್ತಾದ ಭೂಮಿಗೆ ವೈಜ್ಞಾನಿಕ ದರ ನೀಡುವಂತೆ ಒತ್ತಾಯಿಸಿ ಕಳೆದ ವಾರದಿಂದ ಈವರೆಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೆಐಎಡಿಬಿ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನ ಭೇಟಿ ಮಾಡಲಾಗುತ್ತಿದೆ. ರೈತರ ಹೋರಾಟ, ಬೇಡಿಕೆ ಕುರಿತು‌ ಮನವರಿಕೆ ಮಾಡಿಕೊಡಲಾಗಿದೆ. ಜ.31 ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ‌ ಮಾಡಿ‌ ರೈತರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೇವೆ. ಫೆ.5ರೊಳಗೆ ಸ್ಪಂದಿಸುವ ಭರವಸೆಯನ್ನು ಕೈಗಾರಿಕಾ ಸಚಿವರು ನೀಡಿದ್ದಾರೆ. ಕೆಐಎಡಿಬಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಖುದ್ದು ಕುಮಾರಸ್ವಾಮಿಯವರೇ ರೈತರ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಹೇಳಿದರು.

ಕೊನಘಟ್ಟದ ಕಾಮನಬಂಡೆ ಸಮೀಪ ಕೊನಘಟ್ಟ, ನಾಗದೇನಹಳ್ಳಿ, ಕೋಡಿಹಳ್ಳಿ ಹಾಗೂ ಆದಿನಾರಾಯಣಹೊಸಹಳ್ಳಿ ರೈತರು ಕೆಐಎಡಿಬಿ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಅಧಿಕಾರಿಗಳಿಗೆ ಸಾಕಷ್ಟು ಮನವಿ‌ ಕೊಟ್ಟಾಗ ಭೂಸ್ವಾಧೀನ ಪ್ರಕ್ರಿಯೆ‌ ಮುಗಿದಿದೆ. ಡಿನೋಟಿಫೈ ಮಾಡುವ ಅಧಿಕಾರ ನಮಗಿಲ್ಲ. ಸರ್ಕಾರವೇ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಫೆ.1 ರಂದು ಕೈಗಾರಿಕಾ‌ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ದೇವನಹಳ್ಳಿ ರೈತರಿಗೆ ಕೊಟ್ಟ‌ ಮಾದರಿಯಲ್ಲೇ ನಮ್ಮ ರೈತರಿಗೂ ಪರಿಹಾರ ಕೊಡಬೇಕು‌ ಎಂದು ಒತ್ತಾಯಿಸಿದ್ದೇವೆ ಎಂದರು.

ಸಚಿವರ ಬಳಿಗೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಕೂಡ ಬಂದಿದ್ದರು. ಫೆ.5 ರೊಳಗೆ ಅಧಿಕಾರಿಗಳು, ಮುಖಂಡರ ಸಭೆ ಕರೆಯುವ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಗದಿತ ದಿನದೊಳಗೆ ಸಮಸ್ಯೆ ಇತ್ಯರ್ಥವಾಗದಿದ್ದರೆ ಬೃಹತ್ ಪ್ರತಿಭಟನೆ ನಡೆಸಿ, ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಹರೀಶ್ ಗೌಡ ಎಚ್ಚರಿಸಿದರು.

ವೈಜ್ಞಾನಿಕ ಬೆಲೆ ನೀಡದಿದ್ದರೆ ಶೇ.90 ರಷ್ಟು ರೈತರು ಭೂಮಿ‌ ಕೊಡಲು ಒಪ್ಪುವುದಿಲ್ಲ. ಒಬ್ಬರೋ, ಇಬ್ಬರೋ ಮಾತ್ರ ಪರಿಹಾರ ಪಡೆಯಲು ಕೆಐಎಡಿಬಿ ಅಧಿಕಾರಿಗಳ ಬಳಿ ಹೋದರೆ ಸಾಕಷ್ಟು ರೈತರ ಹೊಟ್ಟೆಗೆ ಹೊಡೆದಂತಾಗುತ್ತದೆ. ಹಾಗಾಗಿ ಎಲ್ಲ ರೈತರು,ಮುಖಂಡರು‌ ಒಗ್ಗಟ್ಟಾಗಿ ಹೋರಾಟ ಮುಂದುವರಿಸಬೇಕು ಎಂದು ಹೇಳಿದರು.

ಕೋಡಿಹಳ್ಳಿ ಭಾಗದಲ್ಲಿ ಕೆಐಎಡಿಬಿಯವರು ದೌರ್ಜನ್ಯ ಮಾಡುತ್ತಿದ್ದಾರೆ. ಮುಂದೆ ಎಲ್ಲ ಹೋಬಳಿಗಳಲ್ಲೂ ಇಂತಹ ಪರಿಸ್ಥಿತಿ ಬರಬಹುದು. ಆದ್ದರಿಂದ ಎಲ್ಲ ರೈತರು, ಸಂಘಟನೆಗಳು, ರಾಜಕೀಯ ಪಕ್ಷಗಳು ರೈತರ ಹೋರಾಟ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ನಂತರ ಮುಖಂಡ ನಾಗದೇನಹಳ್ಳಿ ಆನಂದಮೂರ್ತಿ ಮಾತನಾಡಿ, ಕೆಐಎಡಿಬಿ ದಬ್ಬಾಳಿಕೆಗೆ ನಾವೆಲ್ಲ‌ ನಲುಗಿ ಹೋಗಿದ್ದೇವೆ. ಯಾವುದೇ ಬೆಲೆ ನಿಗದಿ ಮಾಡದೇ ಭೂಮಿ ಸ್ವಾಧೀನ‌ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಭೂಮಿಗೆ ಮಾರುಕಟ್ಟೆ ಬೆಲೆ ನಿಗದಿ ಮಾಡದೇ ನಮ್ಮ ಜಮೀನು ಪಡೆಯಲು ಕೆಐಎಡಿಬಿ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಜೀವನಾಧಾರವಾದ ಭೂಮಿಯನ್ನು ಪ್ರಾಣ ಹೋದರೂ ಕೊಡಲ್ಲ. ಫೆ. 12 ರಿಂದ ಆರಂಭವಾಗುವ ಅಧಿವೇಶನದಲ್ಲಿ ಶಾಸಕರಾದಿಯಾಗಿ ಎಲ್ಲರು ಇದರ ವಿರುದ್ದ ದನಿ ಎತ್ತಬೇಕು. ಅಧಿವೇಶನದಲ್ಲೇ ಭೂಸ್ವಾಧೀನ‌ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.

ಟಿಎಪಿಎಂಸಿಎಸ್ ಮಾಜಿ ಅಧ್ಯಕ್ಷ ಆನಂದ್, ಮಾತನಾಡಿ, ಭೂಸ್ವಾಧೀನ‌ ಕಾಯ್ದೆಯ ಪ್ರಕಾರ ರೈತರ ಭೂಮಿಗೆ ನಾಲ್ಕು ಪಟ್ಟು ಪರಿಹಾರ ನೀಡಬೇಕು. ಇಲ್ಲವಾದರೆ ಭೂಮಿ ಬಿಟ್ಟುಕೊಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ‌ ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

10 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

15 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

17 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

21 hours ago