ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್

*ಬೆಂಗಳೂರು, ಡಿಸೆಂಬರ್ 5, 2025*: ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಮಾನ್ಯ ಶ್ರೀ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದರು.

ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇದುವರೆಗೆ ವೈಟ್‌ಫೀಲ್ಡ್ ವಿಭಾಗ ಹಾಗೂ ಇ-4 ಉಪವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಇಮ್ಮಡಿಹಳ್ಲಿ ಮುಖ್ಯರಸ್ತೆಯ ಗಾಂಧೀಪುರದಲ್ಲಿ ನಿರ್ಮಾಣಗೊಂಡಿರುವ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದ್ದು ಗ್ರಾಹಕರಿಗೆ ಅನುಕೂಲಕರವಾಗಲಿದೆ,” ಎಂದರು.

ಈ ಜಾಗ ಪಡೆಯಲು ನೆರವಾದ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಅವರಿಗೆ ಧನ್ಯವಾದ ಹೇಳಿದ ಸಚಿವರು, “ನಗರದ ಪ್ರಮುಖ ಪ್ರದೇಶವಾಗಿರುವ ವೈಟ್‌ಫೀಲ್ಡ್‌ನಲ್ಲಿ ವಿಭಾಗದಲ್ಲಿ 3,88,917 ಕ್ಕೂ ಹೆಚ್ಚಿನ ಗ್ರಾಹಕರಿದ್ದಾರೆ. ಸಾರ್ವಜನಿಕರಿಗೆ ನೂತನ ಕಚೇರಿ ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹದೇವಪುರ ಕ್ಷೇತ್ರ ಶಾಸಕಿ ಮಂಜುಳ ಅರವಿಂದ ಲಿಂಬಾವಳಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ‌ ನಿರ್ದೇಶಕ ಡಾ.ಎನ್.ಶಿವಶಂಕರ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

*ಹೊಸ ಕಟ್ಟಡದ ವಿಶೇಷತೆ*

13,687 ಚದರ ಅಡಿಯ ನೆಲ ಅಂತಸ್ತು ಸೇರಿದಂತೆ ಮೂರು ಅಂತಸ್ತುಗಳ ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಉಪ ವಿಭಾಗ ಕಚೇರಿ ಕಟ್ಟಡವನ್ನು ಅಂದಾಜು 4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

8 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

8 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

11 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

13 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

15 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

15 hours ago