ದೊಡ್ಡಬಳ್ಳಾಪುರ: ನಗರದ ಇಸ್ಲಾಂಪುರ ನಿವಾಸಿ ಉಪೇಂದ್ರ ಎಂಬಾತನ ರುಂಡ ಕತ್ತರಿಸಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆ ತಾಲ್ಲೂಕಿನ ರಾಜಘಟ್ಟ ನಿವಾಸಿ ಪವನ್ @ಪುಲಿ (21) ಎಂಬಾತನಿಗೆ ಕಠಿಣ ಅಜೀವ ಕಾರಾಗೃಹ ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ಅವರು ತೀರ್ಪು ನೀಡಿದ್ದಾರೆ.
ನಗರದ ಡಿ.ಕ್ರಾಸ್ ಸಮೀಪದ ಚರಂಡಿಯಲ್ಲಿ 2018ರಲ್ಲಿ ಉಪೇಂದ್ರ ಎಂಬಾತನ ರುಂಡ ಪತ್ತೆಯಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ 24 ಗಂಟೆಗಳಲ್ಲಿಯೇ ಆರೋಪಿ ಪವನ್ ಎಂಬಾತನನ್ನು ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಜು, ನಗರ ಪೊಲೀಸ್ ಠಾಣೆಯಲ್ಲಿ ಅಂದು ಸಬ್ ಇನ್ಸ್ಪೆಕ್ಟರ್ ಆಗಿದ್ದ ಬಿ.ಕೆ.ಪಾಟೀಲ್ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು.
ನಗರದಲ್ಲಿ ಎರಡು ರೌಡಿ ಗುಂಪುಗಳು ತಮ್ಮ ಪ್ರಾಭಲ್ಯವನ್ನು ಸಾಧಿಸಲು ಈ ಕೃತ್ಯ ನಡೆಸಲಾಗಿತ್ತು ಎಂದು ಪೊಲೀಸರು ತನಿಖಾ ವರದಿಯಲ್ಲಿ ತಿಳಿಸಿದ್ದರು. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಕ್ಕಾಗಿ ಆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಭೀಮಾಶಂಕರ್ ಎಸ್.ಗುಳೇದ್ ಅವರು ಪೊಲೀಸರಿಗೆ ಇಲಾಖೆ ವತಿಯಿಂದ ₹5,000ಗಳ ಬಹುಮಾನವನ್ನು ನೀಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…