
ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ದೊಡ್ಡಬಳ್ಳಾಪುರ ನಗರದ ವಸೀಂ ಪಾಷ(19), ಶುಕೂರ್ ಮಿಯಾ(20) ಎಂದು ಗುರುತಿಸಲಾಗಿದೆ.
ಬೈಕಿನ ನಂಬರ್ ಪ್ಲೇಟ್ ಕಳಚಿ ಗುಂಪು ಗುಂಪಾಗಿ ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಯೋ ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡಾಟ ನಡೆಸುತ್ತಿದ್ದರು…
ಹೆದ್ದಾರಿಯಲ್ಲಿ ಕಾಲೇಜುಗಳ ಸಂಖ್ಯೆ ಹೆಚ್ಚಿರುವುದರಿಂದ ಪುಂಡರಿಂದ ಫೋಸ್. ಕಾಲೇಜು ಹುಡುಗಿಯರನ್ನ ಆಕರ್ಷಿಸಲು ವ್ಹೀಲಿಂಗ್ ಮಾಡಲಾಗುತ್ತಿತ್ತು.
ಇದನ್ನು ಮಾಧ್ಯಮಗಳು ವರದಿ ಮಾಡಿತ್ತು. ವರದಿ ಬೆನ್ನಲ್ಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಎಚ್ಚೆತ್ತುಕೊಂಡು ವ್ಹೀಲಿಂಗ್ ಪುಂಡರನ್ನು ಬಂಧಿಸಿದ್ದಾರೆ.

ಯುವಕರಲ್ಲಿ ಬೈಕ್ ವ್ಹೀಲಿಂಗ್ ಕ್ರೇಜ್ ಹೆಚ್ಚಾಗಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ಟರೂ, ಕಂಬಿ ಹಿಂದೆ ಕೂರಿಸಿದರೂ ವ್ಹೀಲಿಂಗ್ ಮಾಡುವುದನ್ನು ನಿಲ್ಲಿಸಲ್ಲ. ಇತರೆ ವಾಹನ ಸವಾರರಿಗೆ ಸಮಸ್ಯೆಯಾಗುತ್ತೆ, ಅಪಘಾತ ಸಂಭವಿಸಬಹುದು ಎಂದು ತಿಳಿದಿದ್ದರೂ ವ್ಹೀಲಿಂಗ್ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಪ್ರತಿ ದಿನ ಒಂದಲ್ಲಾ ಒಂದು ಕಡೆಗಳಲ್ಲಿ ಯುವಕರು ವ್ಹೀಲಿಂಗ್ ಮಾಡುವ ವಿಡಿಯೋಗಳು ವೈರಲ್ ಆಗುತ್ತಿವೆ.
ವ್ಹೀಲಿಂಗ್ ವೇಳೆ ಅಪಘಾತ ಸಂಭವಿಸಿದರೆ ಅಮಾಯಕ ಜೀವ ಹೋಗುವ ಸಾಧ್ಯತೆ ಇದೆ. ಆದ್ದರಿಂದ ವ್ಹೀಲಿಂಗ್ ಮಾಡದೇ ಸಂಚಾರ ನಿಯಮಗಳನ್ನು ಪಾಲಿಸಿ ವಾಹನ ಚಲಾಯಿಸಬೇಕು…