xr:d:DADy-xRjdxs:2094,j:31709851562,t:22072818
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ ‘ನೆಗೆಟಿವ್’ ಆಗಿದೆ. ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ ಎಂದರು.
ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ರಾಜ್ಯದ ಜನತೆಗೆ ನಾನು ಭರವಸೆ ನೀಡಲು ಬಯಸುತ್ತೇನೆ. ನಮ್ಮ ಆರೋಗ್ಯ ಇಲಾಖೆಯು ಪ್ರತಿಯೊಂದು ಪರಿಸ್ಥಿತಿಯನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ರೀತಿಯ ಸವಾಲನ್ನು ಎದುರಿಸಲು ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.
ಯಾರೂ ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಎಂದು ಕಳಕಳಿಯಿಂದ ವಿನಂತಿಸುತ್ತೇನೆ. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ. ನಿಮ್ಮ ಆರೋಗ್ಯದ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…