ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಕಾರ್ಮಿಕರ(ಇಎಸ್ಐ) ಆಸ್ಪತ್ರೆ.
2013ರ ಜೂನ್ 9ರಂದು 76.88 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರುತ್ತದೆ. ಶಂಕುಸ್ಥಾಪನೆ ಆಗಿ 10ವರ್ಷಗಳು ಕಳೆದರೂ ಸೇವೆಗೆ ಸಿದ್ಧವಾಗದ ಇಎಸ್ಐ ಆಸ್ಪತ್ರೆ.
ತಾಲೂಕಿನಲ್ಲಿ ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶವಿದೆ ಇಲ್ಲಿನ ಕಾರ್ಖಾನೆಗಳಲ್ಲಿ ಲಕ್ಷಾಂತರ ಮಂದಿ ಕಾರ್ಮಿಕರು ದುಡಿಯುತ್ತಿದ್ದಾರೆ. ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ತುರ್ತು ಚಿಕಿತ್ಸೆಗಾಗಿ ಬೆಂಗಳೂರಿನ ರಾಜಾಜಿನಗರಕ್ಕೆ ಕರೆದೊಯ್ಯಲಾಗುತ್ತದೆ. ಇದು ರೋಗಿಗಳಿಗೆ ಸಾಕಷ್ಟು ಸಮಸ್ಯೆಗೆ ಕಾರಣವಾಗುತ್ತಿತ್ತು. ಇದರಿಂದ ದೊಡ್ಡಬಳ್ಳಾಪುರದಲ್ಲಿ ಇಎಸ್ ಐ ಆಸ್ಪತ್ರೆ ಸೇವೆ ಆರಂಭವಾದರೆ ಸಾವಿರಾರು ಕಾರ್ಮಿಕರಿಗೆ ಉಪಕಾರಿಯಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದ್ದರಿಂದ ಇಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆ ನಡೆಸಲಾಯಿತು. ಆದರೆ ಕಾರ್ಮಿಕರ ಸೇವೆಗೆ ಸಿಗದ ಇಎಸ್ಐ ಆಸ್ಪತ್ರೆ. ಸೇವೆ ವಿಳಂಬ ಹಿನ್ನೆಲೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದಕ್ಕೆ ಉತ್ತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಇ.ಎಸ್.ಐ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವುದಿಲ್ಲ ಆದ್ದರಿಂದ ಪ್ರಾರಂಭ ಮಾಡಲು ಸಾಧ್ಯವಾಗಿರುವುದಿಲ್ಲ. ಶೇಕಡ 95ರಷ್ಟು ಕಾಮಗಾರಿಯು ಪೂರ್ಣಗೊಂಡಿದ್ದು, ವಿದ್ಯುತ್ ಸಂಪರ್ಕ ಕಾಮಗಾರಿ ಬಾಕಿ ಇರುತ್ತದೆ.
ಕೇಂದ್ರ ಸರ್ಕಾರದ ಕಾರಾವಿ ನಿಗದಮದವರು ಕಟ್ಟಡ ನಿರ್ಮಾಣದ ಕಾರ್ಯವನ್ನು ಪ್ರಾರಂಭಿಸಿದ್ದು, ಕೆಲಸವು ಪ್ರಗತಿಯಲ್ಲಿದೆ. ಕಾರಾವಿ ನಿಗಮವು ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸಿದ ನಂತರ ಆಸ್ಪತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ಕಾರ್ಮಿಕ ಸಚಿವರು ಉತ್ತರಿಸಿದರು.
ಈ ಆಸ್ಪತ್ರೆಯ ತಕ್ಷಣದಲ್ಲಿ ಆರಂಭಿಸುವ ಅವಶ್ಯಕತೆಯಿರುತ್ತದೆ. ಕಾಮಗಾರಿ ವಿಳಂಬಕ್ಕೆ ಕಾರಣಗಳನ್ನು ನೀಡದೆ ಅತಿಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ತಕ್ಷಣದಲ್ಲಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಸದನದಲ್ಲಿ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…