ಶತಕ ಸಿಡಿಸಿದ ಸೂರ್ಯ, ಭಾರತಕ್ಕೆ ಸರಣಿ ಜಯ

ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ರಾಜ್ ಕೋಟ್ ನ ಅಂಗಳದ ಮೂಲೆ ಮೂಲೆಗೂ ಚೆಂಡನ್ನು ಬಾರಿಸುವ ಮೂಲಕ ಸೂರ್ಯ ಕುಮಾರ್ ಯಾದವ್ ಶತಕ ಸಿಡಿಸಿ ಮತ್ತೊಮ್ಮೆ ತಾನು 360 ಡಿಗ್ರಿ ಆಟಗಾರ ಎಂದು ಸಾಭೀತುಪಡಿಸಿ ತಂಡ ಸರಣಿ ಜಯಿಸುವಂತೆ ಮಾಡಿದರು.

ಮೂರು ಪಂದ್ಯಗಳ ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಜಯಿಸುವ ಮೂಲಕ ಎರಡೂ ತಂಡಗಳಿಗೆ ಮೂರನೇ ಪಂದ್ಯ ಮಹತ್ವದ್ದಾಗಿತ್ತು, ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡರೂ ಸಹ ಪುಟಿದೇಳುವ ಮೂಲಕ ಉತ್ತಮ ಮೊತ್ತ ಕಲೆ ಹಾಕಿತು.

ನಂತರ ಜೊತೆಯಾದ ರಾಹುಲ್ ತ್ರಿಪಾಠಿ (35) ಹಾಗೂ ಶುಭ್ ಮನ್ ಗಿಲ್ (46) ಉತ್ತಮ ಆಟ ಪ್ರದರ್ಶಿಸಿದರು, ತ್ರಿಪಾಠಿ ಔಟಾದ ನಂತರ ಕ್ರಿಸ್ ಗೆ ಬಂದ ವಿಶ್ವ ಟಿ-ಟ್ವೆಂಟಿ ನಂಬರ್ ಒನ್ ಆಟಗಾರ ಸೂರ್ಯಕುಮಾರ್ ಕುಮಾರ್ ಯಾದವ್ 7 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸುವ ಮೂಲಕ (112) ರನ್ ಗಳಿಸಿ ಅಂತರರಾಷ್ಟ್ರೀಯ ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ತಮ್ಮ ಮೂರನೇ ಶತಕ ದಾಖಲಿಸಿದರು.

ಶುಭ್ ಮನ್ ಗಿಲ್ ಔಟಾದ ನಂತರ ಕ್ರಿಸ್ ಗೆ ಬಂದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಆಲ್ ರೌಂಡರ್ ದೀಪಕ್ ಹೂಡ ಹೆಚ್ಚು ಕಾಲ ನಿಲ್ಲಲಿಲ್ಲ, ನಂತರ ಬಂದ ಅಕ್ಷರ್ ಪಟೇಲ್ 9 ಎಸೆತಗಳಲ್ಲಿ (21) ರನ್ ಬಾರಿಸುವ ಮೂಲಕ ಲಂಕಾ ತಂಡಕ್ಕೆ 229 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದರು.

ಗುರಿ ಬೆನ್ನಟ್ಟಿದ ಪ್ರವಾಸಿ ಶ್ರೀಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ಆರಂಭಿಕ ಬ್ಯಾಟ್ಸ್‌ಮನ್ಗಳಾದ ನಿಸಾಂಕ (15) ಹಾಗೂ ಅವಿಶಾಂಕ ಫರ್ನಾಂಡೊ (1) ಅವರನ್ನು ಕ್ರಮವಾಗಿ ಅಶ೯ದೀಪ್ ಸಿಂಗ್ ಹಾಗೂ ಅಕ್ಷರ್ ಪಟೇಲ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ನಾಯಕ ದಸುನ್ ಶನಕಾ (23) ಹಾಗೂ ಧನಂಜಯ ಡಿ ಸಿಲ್ವಾ (22) ಸ್ವಲ್ಪ ಮಟ್ಟಿಗೆ ಪ್ರತಿರೋಧ ತೋರಿದರು ಸಹ ಭಾರತೀಯ ಬೌಲಿಂಗ್ ಎದುರಿಸಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಅಶ೯ದೀಪ್ ಸಿಂಗ್ 3 ವಿಕೆಟ್, ಹಾರ್ದಿಕ್ ಪಾಂಡ್ಯ, ಉಮ್ರಾನ್ ಮಲ್ಲಿಕ್ ಹಾಗೂ ಚಹಲ್ ತಲಾ 2 ವಿಕೆಟ್ ಪಡೆಯುವ ಮೂಲಕ 137 ಕ್ಕೆ ಆಲೌಟ್ ಮಾಡಿ 91 ರನ್ ಗಳ ಜಯ ತಂದುಕೊಟ್ಟರು.

ಭಾರತದ ಪರವಾಗಿ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಅಕ್ಷರ್ ಪಟೇಲ್ ಸರಣಿ ಶ್ರೇಷ್ಠ ಪ್ರಶಸ್ತಿ ಹಾಗೂ ಅಬ್ಬರದ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

9 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

14 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

17 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago