ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ ಕಂಡುಬಂದಿತು. ಬೆಳ್ಳಂಬೆಳಗ್ಗೆ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶನಿದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಅಮಾವಾಸ್ಯೆ ಮತ್ತು ಶನೇಶ್ವರ ಜಯಂತಿ ಸಂಯೋಗವನ್ನು ಅತ್ಯಂತ ಪುಣ್ಯಕರವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆ ಭಕ್ತರು ಎಳ್ಳೆಣ್ಣೆ ದೀಪ ಹಚ್ಚಿ, ತೈಲಾಭಿಷೇಕ, ಅರ್ಚನೆ ಹಾಗೂ ವಿಶೇಷ ಹೋಮಗಳಲ್ಲಿ ಭಾಗವಹಿಸಿದರು. ದೇವಸ್ಥಾನದಲ್ಲಿ ವಿಶೇಷ ಅಲಂಕಾರ, ಭಜನೆ ಹಾಗೂ ಪ್ರಸಾದ ವಿತರಣೆಯ ವ್ಯವಸ್ಥೆ ಮಾಡಲಾಗಿತ್ತು.
ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ದೇವಸ್ಥಾನದ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಹಾಗೂ ವಾಹನ ಸಂಚಾರ ನಿಯಂತ್ರಣ ವ್ಯವಸ್ಥೆ ಕಲ್ಪಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು.
ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣಿನಡಿ ಹುದುಗಿಹೋಗುವ ಅಪಾಯದಲ್ಲಿದ್ದ ವಿಜಯನಗರ ಅರಸರ ಕಾಲದ ಆರು ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ…
ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು…
ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಕುಸಿತವೂ ರೈತರನ್ನು ಕಂಗಾಲಾಗಿಸಿದೆ. ಬೆಳೆ…
ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ…
ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…