ಶನೇಶ್ವರ ಜಾತ್ರಾ ಮಹೋತ್ಸವ: ಇಂದಿನಿಂದ ವಿಶೇಷ ಧಾರ್ಮಿಕ ಆಚರಣೆ: 101 ಶಕ್ತಿ ದೇವತೆಗಳ ಆರಾಧನೆ

ಬೆಂಗಳೂರಿನ ಅಣ್ಣಮ್ಮ ದೇವಿ, ತ್ಯಾಮಗೊಂಡ್ಲುವಿನ ಬಿದಲೂರು ಗಂಗಮ್ಮ, ಬೂದಿಹಾಳದ ಮಾರಮ್ಮ, ಹೆಸರುಘಟ್ಟದ ದುಗ್ಲಮ್ಮ ಸೇರಿದಂತೆ ಮಧುರೆ ಹೋಬಳಿಯ ವಿವಿಧ ಗ್ರಾಮಗಳ ದೇವತೆಗಳನ್ನು ಒಂದೆಡೆಯಲ್ಲಿ ಆರಾಧಿಸುವ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಫೆ.26ರ ಶನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಈ ವಿಶೇಷ ಶಕ್ತಿ ದೇವತೆಗಳ ಆರಾಧನೆಯನ್ನು ಹಮ್ಮಿಕೊಳ್ಳಲಾಗಿದೆ.

101 ಶಕ್ತಿ ದೇವತೆಗಳ ಆರಾಧನೆಯಲ್ಲಿ ಇಂದಿನಿಂದ ದಿನವಿಡಿ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದೆ. ಬೆಂಗಳೂರಿನ ಅಣ್ಣಮ್ಮ ದೇವಿ ವಿಶೇಷ ಆಕರ್ಷಣೆ ಆಗಿದೆ.

ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ. 25 ರಿಂದ 30 ಸಾವಿರ ಜನರಿಗೆ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ಶನೇಶ್ವರ ದೇವಾಲಯದಿಂದ ಕನಸವಾಡಿ ಮುಖ್ಯ ರಸ್ತೆಯಲ್ಲಿ ಶನೇಶ್ವರ ದೇವರ ಸಮೇತವಾಗಿ 101 ದೇವರ ಉತ್ಸವವನ್ನು ವಿಶೇಷ ಕಲಾತಂಡದೊಂದಿಗೆ ಕರೆದೊಯ್ಯಲಾಗುತ್ತದೆ. ಈ ಧಾರ್ಮಿಕ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಾಂಸ್ಕೃತಿಕ ಮೆರಗು

ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ವಿಶೇಷ ಸಾಂಸ್ಕೃತಿ ಕಾರ್ಯಕ್ರಮವನ್ನು ಕೂಡ ಮಾರ್ಚ್ 1ರ ಸಂಜೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನಲೆ ಗಾಯಕ ಹೇಮಂತ್ ಅವರ ತಂಡದ ವತಿಯಿಂದ ಸಂಗೀತ ಸಂಭ್ರಮೋತ್ಸವ ಕಾರ್ಯಕ್ರಮ ನಡೆಯಲಿದೆ.

ಜತೆಗೆ ತುಮಕೂರಿನ ಫೈರ್ ವರ್ಕ್ ತಂಡದಿಂದ ಒಂದು ಗಂಟೆಗಳ ಕಾಲ ವಿಶೇಷ ಸಿಡಿಮದ್ದು ಪ್ರದರ್ಶನ ನಡೆಯಲಿದೆ ಹಾಗೂ ರವೀಂದ್ರ ಕಲಾ ಕ್ಷೇತ್ರದ ಖ್ಯಾತ ಮಹಿಳಾ ತಂಡದಿಂದ ಕುರುಕ್ಷೇತ್ರ ನಾಟಕ ಕೂಡ ಹಮ್ಮಿಕೊಳ್ಳಲಾಗಿದೆ. ಜೊತೆಗೆ ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಇದು ಪಕ್ಷಾತೀತವಾಗಿ ನಡೆಯುವಂತಹ ಕಾರ್ಯಕ್ರಮ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ದೇವಾಲಯದ ಪ್ರಕಾಶ್ ತಿಳಿಸಿದ್ದಾರೆ…

Ramesh Babu

Journalist

Recent Posts

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

3 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

11 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

14 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

1 day ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

1 day ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 days ago