ಬೆಂಗಳೂರಿನ ಅಣ್ಣಮ್ಮ ದೇವಿ, ತ್ಯಾಮಗೊಂಡ್ಲುವಿನ ಬಿದಲೂರು ಗಂಗಮ್ಮ, ಬೂದಿಹಾಳದ ಮಾರಮ್ಮ, ಹೆಸರುಘಟ್ಟದ ದುಗ್ಲಮ್ಮ ಸೇರಿದಂತೆ ಮಧುರೆ ಹೋಬಳಿಯ ವಿವಿಧ ಗ್ರಾಮಗಳ ದೇವತೆಗಳನ್ನು ಒಂದೆಡೆಯಲ್ಲಿ ಆರಾಧಿಸುವ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಫೆ.26ರ ಶನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಈ ವಿಶೇಷ ಶಕ್ತಿ ದೇವತೆಗಳ ಆರಾಧನೆಯನ್ನು ಹಮ್ಮಿಕೊಳ್ಳಲಾಗಿದೆ.
101 ಶಕ್ತಿ ದೇವತೆಗಳ ಆರಾಧನೆಯಲ್ಲಿ ಮಾರ್ಚ್ 1ರ ಬೆಳಗ್ಗೆ 10 ಗಂಟೆಯಿಂದ ದಿನವಿಡಿ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದೆ. ಬೆಂಗಳೂರಿನ ಅಣ್ಣಮ್ಮ ದೇವಿ ವಿಶೇಷ ಆಕರ್ಷಣೆ ಆಗಿದೆ.
ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆಯಿದ್ದು, 25 ರಿಂದ 30,000 ಜನರಿಗೆ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಶನೇಶ್ವರ ದೇವಾಲಯದಿಂದ ಕನಸವಾಡಿ ಮುಖ್ಯ ರಸ್ತೆಯಲ್ಲಿ ಶನೇಶ್ವರ ದೇವರ ಸಮೇತವಾಗಿ 101 ದೇವರ ಉತ್ಸವವನ್ನು ವಿಶೇಷ ಕಲಾತಂಡದೊಂದಿಗೆ ಕರೆದೊಯ್ಯಲಾಗುತ್ತದೆ. ಈ ಧಾರ್ಮಿಕ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಾಂಸ್ಕೃತಿಕ ಮೆರಗು
ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ವಿಶೇಷ ಸಾಂಸ್ಕೃತಿ ಕಾರ್ಯಕ್ರಮವನ್ನು ಕೂಡ ಮಾರ್ಚ್ 1ರ ಸಂಜೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನಲೆ ಗಾಯಕ ಹೇಮಂತ್ ಅವರ ತಂಡದ ವತಿಯಿಂದ ಸಂಗೀತ ಸಂಭ್ರಮೋತ್ಸವ ಕಾರ್ಯಕ್ರಮ ನಡೆಯಲಿದೆ.
ಜತೆಗೆ ತುಮಕೂರಿನ ಫೈರ್ ವರ್ಕ್ ತಂಡದಿಂದ ಒಂದು ಗಂಟೆಗಳ ಕಾಲ ವಿಶೇಷ ಸಿಡಿಮದ್ದು ಪ್ರದರ್ಶನ ನಡೆಯಲಿದೆ ಹಾಗೂ ರವೀಂದ್ರ ಕಲಾ ಕ್ಷೇತ್ರದ ಖ್ಯಾತ ಮಹಿಳಾ ತಂಡದಿಂದ ಕುರುಕ್ಷೇತ್ರ ನಾಟಕ ಕೂಡ ಹಮ್ಮಿಕೊಳ್ಳಲಾಗಿದೆ. ಜೊತೆಗೆ ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಪಕ್ಷಾತೀತವಾಗಿ ಕಾರ್ಯಕ್ರಮಗಳನ್ನು ನೆರವೇರಿಸಿಕೊಡಲಾಗುವುದು ಎಂದು ಕನಸವಾಡಿ ವಿಎಸ್ ಎಸ್ ಎನ್ ಉಪಾಧ್ಯಕ್ಷ ಟಿ.ಮಂಜುನಾಥ ತಿಳಿಸಿದ್ದಾರೆ…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…