ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು “ಬಸಪ್ಪ” ಎಂದೇ ಹೆಸರು ಪಡೆದಿರುವ ಎತ್ತು ಡಿ.22ರ ಭಾನುವಾರದಂದು ಪಯಣ ಬೆಳೆಸಿತು.
ಇತ್ತೀಚೆಗೆ ಈ ಬಸಪ್ಪ ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ರಾಮನ ದರ್ಶನ ಪಡೆದು ಬಂದಿತ್ತು. ಇದೀಗ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು ಪಯಣ ಬೆಳೆಸಿದೆ.
ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿದೆ. ಬಸಪ್ಪನಿಗೆ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದು, ಈಗಾಗಲೇ ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ.
ನಿನ್ನೆ (ಡಿ.22) ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಾಸುದೇವಾ ಚಾರ್ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ಭಜನೆ ಹಾಗೂ ಇತರೆ ಎಲ್ಲಾ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಬಸಪ್ಪನ ಯಾತ್ರೆಗೆ ಚಾಲನೆ ನೀಡಲಾಯಿತು.
ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ವಾಸುದೇವಾ ಚಾರ್, ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ ಎಂಬ ಹೆಸರಿನಲ್ಲಿರುವ ಎತ್ತು ಹೊರಟಿತ್ತು. ಇದೀಗ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ದರ್ಶನ ಪಡೆಯಲು ಹೊರಟಿದೆ. ಪಂಪಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ಅಯ್ಯಪ್ಪ ದರ್ಶನ ಮಾಡಿಸಲಾಗುವುದು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.
ಅಯ್ಯಪ್ಪ ದರ್ಶನ ನಂತರ ಮಾರ್ಗ ಮಾಧ್ಯ ಬರುವಂತಹ ಎಲ್ಲಾ ದೇವರ ದರ್ಶನ ಮಾಡಿಸಲಾಗುವುದು ಎಂದು ಹೇಳಿದರು.
ಇದಾದನಂತರ ಮುಂದಿನ ತೀರ್ಥಯಾತ್ರೆ ತಮಿಳುನಾಡಿನ ರಾಮೇಶ್ವರಂನತ್ತ ಹೊರಡಲಿದೆ. ಇದಕ್ಕೆ ಎಲ್ಲಾ ಸಿದ್ಧತೆ ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…