ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ
ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.
1. ನೇಗ್ಲೇರಿಯಾ ಫೌಲೇರಿ (Naegleria fowlen) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು.
2. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ
3. ನೇಗ್ಲೇರಿಯಾ ಫೌಲರಿ (Naegleria fowleri) ಅತ್ಯಂತ ವಿಷಕಾರಿ (virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.
ಆದ್ದರಿಂದ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.
4. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು. ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ (behavioural disorders) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…