Categories: ರಾಜ್ಯ

‘ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು’- ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು

ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ತಿಳಿಸಿದರು.

ಬಹು ಸಂಖ್ಯಾತರನ್ನು  ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಡ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು  ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

ಈ ವೇಳೆ ಬಸವಧರ್ಮ ಪೀಠದ ಪೀಠಾಧ್ಯಕ್ಷರಾದ ಶ್ರೀಮನ್ನಿರಂಜನ ಮಹಾ ಜಗದ್ಗುರು ಡಾ.ಮಾತೆ ಗಂಗಾದೇವಿಯವರು, ಪೀಠದ ಉಪಾದ್ಯಕ್ಷರಾದ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ್, ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಠಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago