ಶಶಿಕಲಾ ಜೊಲ್ಲೆ, ಎಚ್.ಡಿ.ಕೆ ಅವರ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದರೂ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡಿಲ್ಲ- ಸಿಎಂ ಸಿದ್ದರಾಮಯ್ಯ

ನ್ಯಾಯ-ಸತ್ಯದ ಪರವಾಗಿ ನಿಂತು ಪ್ರಜಾಪ್ರಭುತ್ವದ ಉಳಿವಿನ ಹೋರಾಟಕ್ಕೆ ಗಟ್ಟಿಯಾಗಿ ನಿಂತಿರುವ ಕ್ಯಾಬಿನೆಟ್, ಸಂಸದರು, ರಾಜ್ಯಸಭಾ ಸದಸ್ಯರುಗಳು, ಶಾಸಕರುಗಳು, ಇಡಿ ಪಕ್ಷ, ಹೈ ಕಮಾಂಡ್ ಮತ್ತು ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯಪಾಲರು ರಾಷ್ಟ್ರಪತಿ, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ರಾಜ್ಯಪಾಲರ ಈ ಧೋರಣೆಯನ್ನು ಸಚಿವ ಸಂಪುಟ ತೀವ್ರವಾಗಿ ಖಂಡಿಸಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಧಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ, ಪ್ರಜಾತಂತ್ರಕ್ಕೆ ಧಕ್ಕೆ ಎಂದು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಹೇಳಿದರು.

ಎಲ್ಲಾ ರಾಜ್ಯ ಸರ್ಕಾರಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಸೆಪ್ಟೆಂಬರ್ 3, 2021 ಕ್ಕೆ ಕೇಂದ್ರ ಸರ್ಕಾರವೇ ಕಳುಹಿಸಿರುವ ಸುತ್ತೋಲೆ ಪ್ರಕಾರವೇ ರಾಜ್ಯಪಾಲರು ಪ್ರೊಸೀಜರ್ ಅನುಸರಿಸಿಲ್ಲ. ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನೇ ರಾಜ್ಯಪಾಲರು ಪಾಲಿಸಿಲ್ಲ. ಆದ್ದರಿಂದ ರಾಜ್ಯಪಾಲರ ನಿರ್ಣಯ ಕಾನೂನುಬಾಹಿರ. ಈ ಕಾನೂನುಬಾಹಿರ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ ಎಂದರು.

ಚುನಾಯಿತ ಸರ್ಕಾರವನ್ನು ಕಿತ್ತಾಕುವ ಕೇಂದ್ರ ಸರ್ಕಾರದ ದುರುದ್ದೇಶದ ಪ್ರಯತ್ನಕ್ಕೆ ನಾವು ತಡೆಯೊಡ್ಡಬೇಕು ಎಂದು ನಿರ್ಣಯಿಸಿದ್ದೇವೆ. ನಮ್ಮ ಯಶಸ್ವೀ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೂಡ ವಿರೋಧಿಸಿದ್ದರು. ಹೀಗಾಗಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಕುಟಿಲತನವನ್ನು ಯಶಸ್ವಿಯಾಗಿ ವಿರೋಧಿಸಿ ಸತ್ಯವನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.

ಅಬ್ರಹಾಂ ಎನ್ನುವವರು 26-7-2024 ರ ಬೆಳಗ್ಗೆ 11:30 ಗೆ ದೂರು ನೀಡಿದರೆ ಅದೇ ದಿನ 10 ಗಂಟೆಗೆ ರಾಜ್ಯಪಾಲರು ಶೋ ಕಾಸ್ ನೋಟಿಸ್ ರೆಡಿ ಮಾಡಿದ್ದರು. ಆದರೆ ಶಶಿಕಲಾ ಜೊಲ್ಲೆ, ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದರೂ ಅವರ ವಿರುದ್ಧದ ತನಿಖೆಗೆ ಅನುಮತಿ ನೀಡಿಲ್ಲ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ತನಿಖೆ ನಡೆದು ಕುಮಾರಸ್ವಾಮಿ ತಪ್ಪಿತಸ್ಥ ಎಂದು ಉಲ್ಲೇಖವಾಗಿದ್ದರೂ, ತನಿಖೆಯ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿದ್ದರೂ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ ಎಂದು ತಿಳಿಸಿದರು.

ಹಾಗೆಯೇ ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿರುದ್ಧ ತನಿಖೆ ನಡೆದು ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ, ತನಿಖಾ ವರದಿ ಉಲ್ಲೇಖವಾಗಿದ್ದರೂ ಇದೇ ರಾಜ್ಯಪಾಲರು ಕ್ರಮಕ್ಕೆ ಅನುಮತಿ ನೀಡಿಲ್ಲ. ಆದರೆ ನನ್ನ ವಿಚಾರದಲ್ಲಿ ಮಾತ್ರ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ ಎಂದರು.

ನನ್ನ ವಿರುದ್ಧ ತನಿಖೆ ನಡೆದಿಲ್ಲ. ತನಿಖೆಯಲ್ಲಿ ನನ್ನ ಪಾತ್ರದ ಉಲ್ಲೇಖವಿಲ್ಲ. ನನ್ನ ಪಾತ್ರದ ಬಗ್ಗೆ ಯಾರೂ ಯಾವುದೇ ದಾಖಲೆ ಕೊಟ್ಟಿಲ್ಲ. ನನ್ನ ಸರ್ಕಾರದ ಅವಧಿಯಲ್ಲಿ ನಡೆದ ವಿಚಾರ ಇದಲ್ಲ. ನನ್ನಿಂದ ಒಂದೂ ಪತ್ರ ಹೋಗಿಲ್ಲ. ನನ್ನ ಸಹಿ ಎಲ್ಲೂ ಇಲ್ಲ. ನನ್ನಿಂದ ಒಂದೂ ಮನವಿ ಪತ್ರವೂ ಹೋಗಿಲ್ಲ. ಎಲ್ಲವೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವುದು. ನಾನು ಏಕೆ ರಾಜೀನಾಮೆ ನೀಡಬೇಕು? ನನ್ನ ಪಾತ್ರದ ಬಗ್ಗೆ ಎಲ್ಲೂ, ಯಾರೂ ಹೇಳುತ್ತಿಲ್ಲ. ಆದರೂ ನಾನೇಕೆ ರಾಜೀನಾಮೆ ನೀಡಲಿ? ಎಂದು ಹೇಳಿದ್ದಾರೆ.

ಯಾವುದೇ ದಾಖಲೆ, ಸಾಕ್ಷ್ಯ, ತನಿಖೆ ಇಲ್ಲದಿದ್ದರೂ ರಾಜ್ಯಪಾಲರು ಆಧಾರವಿಲ್ಲದೆ ಅನುಮತಿ ನೀಡಿ ಕೇಂದ್ರದ ಒತ್ತಡಕ್ಕೆ ಒಳಗಾಗಿದ್ದಾರೆ. ತಪ್ಪು ಮಾಡದ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾನೂನುಬಾಹಿರ ನಿರ್ಣಯ ಕೈಗೊಂಡ ರಾಜ್ಯಪಾಲರು ರಾಜೀನಾಮೆ ನೀಡಬೇಕು ಎಂದರು.

ದೊಡ್ಡ ಷಡ್ಯಂತ್ರ ನಡೆಯುತ್ತಿರುವುದು ನಮಗೆ ಗೊತ್ತಿತ್ತು. ಅದಕ್ಕೆ ನಾವೂ ಹೋರಾಟದ ಸಿದ್ಧತೆ ಮಾಡಿಕೊಂಡಿದ್ದೇವೆ. ಬಿಜೆಪಿ-ಜೆಡಿಎಸ್ ರಾಜ್ಯದ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ನಾವು ಸತ್ಯ ಮುಂದಿಟ್ಟು ಜನರ ನಡುವೆ ಮತ್ತಷ್ಟು ಗಟ್ಟಿ ಆಗುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ‌ ಸಮಾವೇಶಕ್ಕೆ ಒಂದೂವರೆ ಲಕ್ಷ ಜನ‌ ಸೇರಿದ್ದರು. ಬಿಜೆಪಿಗೆ 30 ಸಾವಿರ ಕೂಡ ಸೇರಿಲ್ಲ. ಜನ ನಮ್ಮ ಪರವಾಗಿ ಇರುವುದಕ್ಕೆ ಇದೇ ಸಾಕ್ಷಿ ಎಂದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

1 hour ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

11 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

12 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

12 hours ago