ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೊಟ್ಟೆಯಲ್ಲಿದ್ದ 570 ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ.
ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ ಅಮಲಾಪುರದಲ್ಲಿ ಮಹಿಳೆಯೊಬ್ಬರು ಪಿತ್ತಗಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆ ಸೇರಿದ್ದಾರೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಆಕೆಯ ಹೊಟ್ಟೆಯಿಂದ 570 ಕಲ್ಲುಗಳನ್ನು ಹೊರತೆಗೆದಿದ್ದಾರೆ.
ದೇವಗುಪ್ತಂನ ಜಲೇಂ ನರಸವೇಣಿ ಎಂಬ 31 ವರ್ಷದ ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಅಮಲಾಪುರಂನ ಎಎಸ್‌ಎ ಆಸ್ಪತ್ರೆಗೆ ಸೇರಿದರು. ಸದ್ಯ ಮಹಿಳೆಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.