
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರವೀಣ್ ಅವರು ಗ್ರಾಮ ಗಸ್ತು ಸಂದರ್ಭದಲ್ಲಿ ತಾಲೂಕಿನ ಆದಿನಾರಾಯಣ ಹೊಸಹಳ್ಳಿ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಸ್ಥಳೀಯ ಪರಿಸ್ಥಿತಿ ಹಾಗೂ ಶಾಂತಿ–ಭದ್ರತೆ ಕುರಿತ ಮಾಹಿತಿಯನ್ನು ಸಾರ್ವಜನಿಕರಿಂದ ಸಂಗ್ರಹಣೆ ಮಾಡಿದರು.
ಅದೇರೀತಿ ಸಾರ್ವಜನಿಕರಿಗೆ ಕಾನೂನು ಪಾಲನೆ, ಶಾಂತಿ ಕಾಪಾಡುವ ಜವಾಬ್ದಾರಿ ಹಾಗೂ ಅಪರಾಧ ತಡೆಗಟ್ಟುವ ಕುರಿತು ಅರಿವು ಮೂಡಿಸಿದರು.
ಈ ವೇಳೆ ನಾಗರಿಕರು ಪೊಲೀಸರೊಂದಿಗೆ ಸಹಕರಿಸಿ ಶಾಂತಿ ಮತ್ತು ಭದ್ರತೆ ಕಾಯ್ದುಕೊಳ್ಳುವಂತೆ ವಿನಂತಿಸಿಕೊಂಡರು.