ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.
“ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ ಎಂದು ಹೇಳಿದರು.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು ಎಂದರು.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ ಎಂದು ಹೇಳಿದರು.

ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

9 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

13 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

16 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

18 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago