ಗೌರವ ಧನ ಹೆಚ್ಚಿಸುವಂತೆ ಶಾಲಾ ಅಡುಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ ಹೆಚ್ಚಿಸುವಂತೆ ಮನವಿ ಪತ್ರ ನೀಡುವ ಮೂಲಕ ಸರ್ಕಾರ ಗಮನಕ್ಕೆ ತರಲು ಆಗ್ರಹಿಸುತ್ತಿದ್ದಾರೆ.
ಅದೇ ರೀತಿ ಇಂದು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿಯವರು ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ ಹೆಚ್ಚಿಸುವ ಕುರಿತು ಮನವಿ ಪತ್ರ ಸಲ್ಲಿಸಿದರು…
ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿಯವರಿಗೆ 4700 ರೂ. ಮತ್ತು ಸಹಾಯಕ ಅಡುಗೆ ಸಿಬ್ಬಂದಿಗೆ 4600 ರೂ. ಮಾಸಿಕ ಗೌರವ ಧನ ನೀಡಲಾಗುತ್ತಿದ್ದು, ಈ ಗೌರವ ಧನವು ತುಂಬಾ ಕಡಿಮೆಯಾಗಿದೆ. ಜೀವನ ನಡೆಸಲು ಕಷ್ಟಕರವಾಗುತ್ತಿದೆ. ಸರ್ಕಾರ ನೀತಿಯಾದ ಕನಿಷ್ಠ ವೇತನವನ್ನು ನಮಗೂ ಅನ್ವಯವಾಗುವಂತೆ ಜಾರಿ ಮಾಡಬೇಕು. ವರ್ಷ ಬಜೆಟ್ ಮಂಡಿಸುವಾಗ ನಮ್ಮ ಗೌರವ ಧನ ಹೆಚ್ಚಿಸಬೇಕು. ಗೌರವ ಧನ ಹೆಚ್ಚಿಸಲು ಒತ್ತಾಯಿಸುತ್ತಿರುವ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು..
ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿ ಇದ್ದರು…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…