ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಉಚಿತವಾಗಿ ಪೆನ್ನು, ಪೆನ್ಸಿಲ್, ಬುಕ್ಸ್ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದರು.
ಅದೇರೀತಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರನ್ನು ಸಹ ವಿತರಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ಸಾಮಗ್ರಿಗಳನ್ನು ಸದುಪಯೋಗ ಮಾಡಿಕೊಂಡು ಚೆನ್ನಾಗಿ ಅಧ್ಯಯನ ಮಾಡಿ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು. ನಿಮ್ಮ ಭವಿಷ್ಯ ಉಜ್ವಲವಾಗಬೇಕು ಎಂದು ಹಾರೈಸಿದರು.
ಉತ್ತಮ ಸಮಾಜ ನಿರ್ಮಾಣಕ್ಕಾಗಿ ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು. ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಕನಸವಾಡಿ ಪಂಚಾಯತಿ ಉಪಾಧ್ಯಕ್ಷ ಕೃಷ್ಣಮೂರ್ತಿ, ಮಾಜಿ ಸೈನಿಕ ಶಿವಕುಮಾರ್ , ಕೆ.ಬಿ.ಶ್ರೀನಿವಾಸ್, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಶ್ರೀಕಾಂತ ಕೆ.ವಿ, ಮಾಜಿ ವಿ.ಎಸ್.ಎಸ್.ಎನ್ ಸದಸ್ಯ ವಿಶ್ವನಾಥ್, ಎಸ್‌ಡಿಎಂಸಿ ಸದಸ್ಯಸುಮಿತ್ರ, ರಾಮಮೂರ್ತಿ, ಮುಖ್ಯೋಪಾಧ್ಯಾಯ ನಾಗೇಂದ್ರ, ಆರ್.ವಿ ಗೌಡ, ಪ್ರಭಾಕರ್, ವರುಣ್ ಗೌಡ, ಶಶಿಕುಮಾರ್, ದಿಲೀಪ್, ರವಿ, ರಮೇಶ್, ಶಿವರಾಜ್, ಶಾಲಾ ಸಿಬ್ಬಂದಿ ವರ್ಗ ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…