ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ದಲಿತ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದರು.
1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಆರ್ಥಿಕ ಅನುಮೋದನೆ ನೀಡಿದ್ದೆ. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ ₹725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದು ತಿಳಿಸಿದರು.
ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.
ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಚಾರಿಕ ಗುಣ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಹೇಳಿದರು.
ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಮಕ್ಕಳ ಅನುಕೂಲಕ್ಕಾಗಿ ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇಟ್ಟಿಲ್ಲ ಎಂದರು.
ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಹೇಳಿದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…