ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಪರಸ್ಪರ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದ ವಂದನಾ (16), ನವೀನ್ (22) ಮೃತ ಪ್ರೇಮಿಗಳು ಎಂದು ಮೂಲಗಳಿಂದ ತಿಳಿದು ಬಂದಿದೆ.
ನವೀನ್ ಡ್ರೈವರ್ ಕೆಲಸವನ್ನು ಮಾಡುತ್ತಿದ್ದು, ತಮ್ಮದೇ ಸಮುದಾಯದ ವಂದನಾಳನ್ನು ಪ್ರೀತಿ ಮಾಡುತ್ತಿದ್ದನು. ಈ ವಿಚಾರ ಪೋಷಕರ ಗಮನಕ್ಕೆ ಬಂದು ಮಾರ್ಚ್ 30 ರಂದು ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕೇಸ್ ಅಡಿ ದೂರು ದಾಖಲಿಸಿಕೊಂಡು ಬಾಲಕಿಯನ್ನು ಸಾಂತ್ವಾನ ಕೇಂದ್ರಕ್ಕೆ ರವಾನಿಸಿದ್ದರು.
ಇನ್ನೂ ಕಳೆದ ದಿನವಷ್ಟೇ ಇಬ್ಬರು ಒಂದು ಕಡೆ ಸೇರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದ್ದು, ಅದರಂತೆ, ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಗ್ರಾಮದ ಅರಣ್ಯ ಪ್ರದೇಶಕ್ಕೆ ಹೋಗಿ ಕಳೆದ ಸೆ.13 ರ ಸಂಜೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ನಗರದ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದಾರೆ.
ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಬಾಲಕಿ ಹಾಗೂ ಯುವಕನ ಪೋಷಕರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ.
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…