ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲಾ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದರು.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…