ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದು ಕಡ್ಡಾಯ- ಸಿಎಂ ಸಿದ್ದರಾಮಯ್ಯ

ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲಾ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದರು.

ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟದಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಅವರು ಕನಸು ಕಂಡಿದ್ದರು. ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago