ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸದಾಶಿವ ನಗರದ ನೀವ್ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದರು.
ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದ್ದಾರೆ.