Categories: ಮಂಡ್ಯ

ಶಾಲೆಯಲ್ಲಿ ಹೋಳಿ ಹಬ್ಬ ಆಚರಿಸಿ ಭೋಜನ ಮಾಡಿದ ನಂತರ 30 ಮಕ್ಕಳಿಗೆ ಫುಡ್ ಪಾಯಿಸನ್: ಓರ್ವ ಬಾಲಕ ಸಾವು: ಮಂಡ್ಯ ಜಿಲ್ಲಾಸ್ಪತ್ರೆಗೆ ಡಿಸಿ, ಎಸ್ಪಿ ಭೇಟಿ ಪರಿಶೀಲನೆ

ಮಾ.14ರಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ಬಾಲಕನ‌ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಕೆಲವು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತಾಗಿ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ‌ ಅವರು ಘಟನಾ ಸ್ಥಳಕ್ಕೆ ಹಾಗು ಆಸ್ಪತ್ರೆಗೆ ಭೇಟಿ ನೀಡಿ, ಪ್ರಕರಣದ ಕುರಿತು ಮಾಹಿತಿ ಪಡೆದು, ಮಕ್ಕಳ ಆರೋಗ್ಯವನ್ನು ವಿಚಾರಿಸಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

2 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

10 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

12 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

16 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

17 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

19 hours ago