ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ ದ್ವಾರದಲ್ಲೇ ಕಸದ ರಾಶಿ ಹಾಗೂ ದುರ್ವಾಸನೆ ಸಾರ್ವಜನಿಕರನ್ನು ಸ್ವಾಗತಿಸುವಂತಾಗಿದೆ. ಶಾಲೆ, ಅಂಗನವಾಡಿ, ದೇವಸ್ಥಾನ, ಅಂಗಡಿಗಳು ಹಾಗೂ ವಸತಿ ಪ್ರದೇಶದ ಸಮೀಪದಲ್ಲೇ ತ್ಯಾಜ್ಯ ರಾಶಿ ಬಿದ್ದಿರುವುದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವೇಶ ದ್ವಾರದಲ್ಲೇ ತ್ಯಾಜ್ಯವನ್ನು ಅಸಮರ್ಪಕವಾಗಿ ಸುರಿಯುತ್ತಿರುವುದರಿಂದ ಸ್ಥಳೀಯ ನಿವಾಸಿಗಳು, ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಸದ ರಾಶಿಯಿಂದ ದುರ್ವಾಸನೆ ವ್ಯಾಪಿಸುತ್ತಿದ್ದು, ನೊಣ ಮತ್ತು ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ವ್ಯಕ್ತವಾಗಿದೆ.

ಅತ್ಯಂತ ಆತಂಕಕಾರಿ ಸಂಗತಿಯೆಂದರೆ, ಶಾಲೆ ಹಾಗೂ ಅಂಗನವಾಡಿ ಮುಂಭಾಗದಲ್ಲೇ ಕಸದ ರಾಶಿ ಬಿದ್ದಿದ್ದು, ಮಕ್ಕಳು ಪ್ರತಿದಿನ ದುರ್ವಾಸನೆಯ ಮಧ್ಯೆಯೇ ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವೃದ್ಧರು, ಮಹಿಳೆಯರು ಹಾಗೂ ರೋಗಿಗಳ ಆರೋಗ್ಯಕ್ಕೂ ಇದು ಗಂಭೀರ ಅಪಾಯವನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹೋಟೆಲ್‌ಗಳ ಆಹಾರ ತ್ಯಾಜ್ಯ ಹಾಗೂ ಮಾಂಸದಂಗಡಿಗಳ ತ್ಯಾಜ್ಯವನ್ನು ಇಲ್ಲಿ ಸುರಿಯಲಾಗುತ್ತಿರುವುದರಿಂದ ಬೀದಿ ನಾಯಿಗಳ ಕಾಟವೂ ಹೆಚ್ಚಾಗಿದೆ. ಕಸದ ರಾಶಿಯ ಸುತ್ತಮುತ್ತ ನಾಯಿಗಳು ಗುಂಪುಗೂಡುತ್ತಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು, ಆತಂಕದಲ್ಲೇ ಓಡಾಡುವಂತಾಗಿದೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಗಾಯತ್ರಿ ಮಂಜುನಾಥ್ ಮಾತನಾಡಿ, ಕಸದ ಸಮಸ್ಯೆ ನಿವಾರಣೆಗೆ ಹಲವು ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿದ್ದೇವೆ. ಸಿಸಿಟಿವಿ ಅಳವಡಿಸಿ ಕಸ ಎಸೆಯುವವರಿಗೆ ದಂಡ ವಿಧಿಸುವಂತೆ ಕೂಡ ಒತ್ತಾಯಿಸಿದ್ದೇವೆ. ಆದರೆ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಪಂಚಾಯಿತಿ ಸಿಬ್ಬಂದಿ ಪ್ರತಿದಿನ ಮನೆಮನೆಗೆ ತೆರಳಿ ಕಸ ಸಂಗ್ರಹಿಸಬೇಕು. ಆದರೆ ವಾರಕ್ಕೊಮ್ಮೆ ಮಾತ್ರ ಕಸ ಸಂಗ್ರಹಿಸುತ್ತಿದ್ದಾರೆ. ಇದರಿಂದ ಜನರು ಎಲ್ಲೆಂದರಲ್ಲಿ ಕಸ ಎಸೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡನೇ ಹಾಗೂ ಮೂರನೇ ವಾರ್ಡ್‌ಗಳಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಹೆಚ್ಚಿದ್ದು, ಅವರಲ್ಲೂ ತ್ಯಾಜ್ಯ ವಿಲೇವಾರಿ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಪಾಲನಜೋಗಿಹಳ್ಳಿಯ ಸ್ವಚ್ಛತೆಗೆ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಹೆಚ್ಚಿನ ಆದ್ಯತೆ ನೀಡಬೇಕು. ತ್ಯಾಜ್ಯ ವಿಲೇವಾರಿ ಸ್ಥಳವನ್ನು ತಕ್ಷಣ ಸ್ಥಳಾಂತರಿಸಿ, ಚರಂಡಿಗಳ ದುರಸ್ತಿ, ನಿಯಮಿತ ಕಸ ಸಂಗ್ರಹಣೆ ಹಾಗೂ ಸ್ವಚ್ಛತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

6 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

7 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

11 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

12 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

19 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

19 hours ago