ಶಾಲೆ ಉಳಿವಿಗಾಗಿ “ನಮ್ಮ ಶಾಲೆ ನಮ್ಮ ಹಕ್ಕು” ಅಭಿಯಾನ

ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ “ನಮ್ಮ ಶಾಲೆ ನಮ್ಮ ಹಕ್ಕು” ಎಂಬ ಹೆಸರಲ್ಲಿ ಹಳೇ ವಿದ್ಯಾರ್ಥಿಗಳ ಮಹಾ ಸಂಗಮ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಬೆಂಗಳೂರಿನ ಖಾಸಗಿ ಸಂಸ್ಥೆಯ ಆಡಳಿತ ಮಂಡಳಿಯ ಕೆಲವು ಸದಸ್ಯರು, ಕಟ್ಟಡ ನಿರ್ಮಿಸಿಕೊಂಡು ಕಳೆದ 5 ವರ್ಷಗಳಿಂದ ಖಾಸಗಿ ಶಾಲೆ ಶಾಲೆಯನ್ನು ನಡೆಸುತ್ತಿದ್ದಾರೆ. ಆದರೆ ಸುಮಾರು 50ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಗ್ರಾಮದ ಹೆಸರಾಂತ ಶ್ರೀ ಮಾರುತಿ ಪ್ರೌಢಶಾಲೆಯನ್ನು ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ಎಂದು ಹಳೆ ವಿದ್ಯಾರ್ಥಿಗಳು ಆರೋಪಿಸಿದರು.

1972ರಲ್ಲಿ ಅಂದಿನ ದೊಡ್ಡಬಳ್ಳಾಪುರ ಶಾಸಕರಾದ ಜಿ.ರಾಮೇಗೌಡರ ಸಹಕಾರದಿಂದ ಪ್ರಾರಂಭವಾಗಿ ಹಿಂದಿನಿಂದಲೂ ಸರ್ಕಾರಿ ಅನುದಾನದಿಂದ ನಡೆಯುತ್ತಿದೆ. ಈ ಶ್ರೀ ಮಾರುತಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿ ಈಗಾಗಲೇ ಹೆಚ್ಚಿನ ಪ್ರಸಿದ್ಧಿ ಪಡೆದಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ  ವಿವಿಧ ರಾಜ್ಯಗಳಷ್ಟೇ ಅಲ್ಲದೆ ವಿದೇಶಗಳಲ್ಲಿಯೂ ಉತ್ತಮ ಸ್ಥಾನ- ಮಾನ ಗಳಿಸಿದ್ದಾರೆ. ಆದರೆ ಈ ಶಾಲೆಯ ಆವರಣದಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ಸ್ಥಾಪಿಸುವ ಮೂಲಕ ಸರ್ಕಾರಿ ಅನುದಾನಿತ ಶಾಲೆಯನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ನಮ್ಮ ಶಾಲೆಯ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಉಳಿವಿಗಾಗಿ ಹಳೆಯ ವಿದ್ಯಾರ್ಥಿಗಳಿಂದ ಲಯನ್ಸ್ ಕ್ಲಬ್ ಯಲಹಂಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಿ ರಕ್ತ ಕೊಟ್ಟೆವು ಪ್ರಾಣ ಬಿಡೆವು ಎಂಬ ಸಂದೇಶವನ್ನು ಈ ಮೂಲಕ ಶಾಲೆಯ ಆಡಳಿತ ಮಂಡಳಿಗೆ ನೀಡುತ್ತಿದ್ದೇವೆ ಎಂದು ಹಳೆ ವಿದ್ಯಾರ್ಥಿ ರಾಜಘಟ್ಟ ಗಣೇಶ್ ತಿಳಿಸಿದರು.

ಹಳೇ ವಿದ್ಯಾರ್ಥಿಗಳಾದ ಸುರೇಶ್, ವಿನೋದ್  ಮಾತನಾಡಿ, ಸಾವಿರಾರು ಬಡ ವಿದ್ಯಾರ್ಥಿಗಳ ಜೀವನ ರೂಪಿಸಿರುವ ಮಾರುತಿ ಪ್ರೌಢಶಾಲೆಗೆ ಇಂದು ಅಳಿವು ಉಳಿವಿನ ಪರಿಸ್ಥಿತಿ ಎದುರಾಗಿರುವುದು ವಿಪರ್ಯಾಸ, ನಮ್ಮ ಶಾಲೆ ಉಳಿವಿಗಾಗಿ ನಾವೆಲ್ಲರೂ ಒಟ್ಟಾಗಿ ಮುಂದಾಗಿದ್ದೇವೆ. ಸುತ್ತಲ ಹತ್ತಾರು ಹಳ್ಳಿಗಳ ವಿದ್ಯಾಭ್ಯಾಸಕ್ಕೆ ಮೂಲವಾಗಿರುವ ಸರ್ಕಾರಿ ಅನುದಾನಿತ ಶಾಲೆ ಮುಚ್ಚಿಸುವ ಹುನ್ನಾರ ನೆಡೆಯುತ್ತಿದೆ ನಮ್ಮ ಶಾಲೆ ಬಿಟ್ಟುಕೊಡುವ ಮಾತೇ ಇಲ್ಲ ಇದು ನಮ್ಮ ಶಾಲೆ ಎಂದರು.

ಈ ಸಂದರ್ಭದಲ್ಲಿ ಸುರೇಶ, ವಿನೋದ್, ಅನಂತ್, ವೇಣು, ಮಂಜುನಾಥ್, ಅಂಬರೀಶ್, ನವೀನ್, ಗಂಗರಾಜು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

9 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

12 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

14 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

17 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

18 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago