Categories: ಕೋಲಾರ

ಶಾಸಕರ ಬಹಿರಂಗ ಕಾದಾಟಕ್ಕೆ ವೇದಿಕೆಯಾದ ಕೋಮುಲ್ ವಿಶೇಷ ಸಾಮಾನ್ಯ ಸಭೆ:‌ ಗದ್ದಲ ನೂಕಾಟ ಹೊಡೆದಾಟದ ನಡುವೆ ಕ್ಷೇತ್ರ ವಿಂಗಡಣೆಗೆ ಅನುಮೋದನೆ,

ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ ಗೋಪಾಲಮೂರ್ತಿ ಅವರು ಖಾಸಗಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಸ್ಥಳದಿಂದ ಜಾಗ ಖಾಲಿ ಮಾಡಿದರು.

ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ 11: 30 ಕ್ಕೆ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು ಈ ಸಭೆಗೆ ಕಾಂಗ್ರೆಸ್ ಶಾಸಕರಾದ ಎಸ್.ಎನ್ ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ ಸೇರಿದಂತೆ ಎಪಿಸಿಎಸ್ ಅಧ್ಯಕ್ಷರು ಹಾಗೂ ಡೇಲಿಗೇಟ್ಸ್ ಆಗಮಿಸಿದ್ದರು ಸಭೆಯಲ್ಲಿ ಸಭೆಯಲ್ಲಿ ಆಡಳಿತಾಧಿಕಾರಿ ಡಾ ಮೈತ್ರಿ ಸಭೆಯು ಅಜೆಂಡಾ ಪ್ರಕಾರ ಪ್ರಾರಂಭಿಸುತ್ತಿದ್ದಂತೆ ಕ್ಷೇತ್ರ ವಿಂಗಡಣೆ ವಿಚಾರದಲ್ಲಿ ಅನುಮೋದನೆಗೆ ಕೇಳಿದಾಗ ಸಭೆಯಲ್ಲಿ ಕೆಲವರ ವಿರೋಧದ ನಡುವೆಯೂ ಬಹುತೇಕರು ಅನುಮೋದನೆಯನ್ನು ಬೆಂಬಲಿಸಿದರು.

ಕೋಮುಲ್ ಚುನಾವಣೆಗೆ ಕ್ಷೇತ್ರಗಳನ್ನು ನಿಗದಿಪಡಿಸಲು ಹೈಕೋರ್ಟ್ ಸೂಚನೆಯಂತೆ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಮತ್ತು ಕೆ.ವೈ ನಂಜೇಗೌಡ ಅವರ ಪ್ರತಿಷ್ಠೆಯ ಕಣವಾಗಿತ್ತು ಒಬ್ಬರು ಶಾಸಕರು ತಮ್ಮ ತಮ್ಮ ಬೆಂಬಲಿಗರ ಪಡೆಯೊಂದಿಗೆ ಪ್ರತ್ಯೇಕವಾದ ಆಸನಗಳಲ್ಲಿ ಕೂತಿದ್ದರು.

ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹೈಕೋರ್ಟ್ ಆದೇಶದಂತೆ 12(5) ನಡಿ ಕ್ಷೇತ್ರ ವಿಂಗಡಣೆಗೆ ಅನುಮೋದನೆ ಸಹಕಾರ ಕೋರಿದ ಸಂದರ್ಭದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗ ಎಂಪಿಸಿಎಸ್ ಅಧ್ಯಕ್ಷರು ತೀವ್ರ ವಿರೋಧ ವ್ಯಕ್ತಪಡಿಸಿದರ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯ ಮಾಡಿದ್ದು ಸಭೆಯಲ್ಲಿ ಅಧ್ಯಕ್ಷರುಗಳು ಕೈಎತ್ತುವುದರ ಮೂಲಕ ಮ ಮೂರನೇ ಎರಡರಷ್ಟು ಮತಗಳು ಪರವಾಗಿ ಬಿದ್ದಿವೆ ಎಂದು ಆಡಳಿತಾಧಿಕಾರಿ ಡಾ.ಮೈತ್ರಿ ಪ್ರಕಟಿಸಿದರು.

ಸಭೆಯಲ್ಲಿ ಅನುಮೋದನೆಗೆ ಒಪ್ಪಿಗೆ ಸಿಕ್ಕಿದ ಕೂಡಲೇ ಶಾಸಕ ಕೆ.ವೈ ನಂಜೇಗೌಡ ಬೆಂಬಲಿಗರು ಖುಷಿಯಿಂದ ಜೈಕಾರಗಳೊಂದಿಗೆ ಹೊರನಡೆದರು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಬೆಂಬಲಿಗರು ಆಡಳಿತಾಧಿಕಾರಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅಲ್ಲದೇ ಕೋಮುಲ್ ಎಂಡಿ ಗೋಪಾಲಮೂರ್ತಿ ಹಾಗೂ ಮಾರುಕಟ್ಟೆ ವಿಭಾಗದ ಅಧಿಕಾರಿ ಚೇತನ್ ಅವರ ಮೇಲೆ ಹಲ್ಲೆ ಮಾಡಿದರು ಹಲ್ಲೆಯ ನಂತರ ಇತರೆ ಅಧಿಕಾರಿಗಳು ಎಂಡಿಯನ್ನು ಕೊಠಡಿಯಲ್ಲಿ ಇರಿಸಿ ರಕ್ಷಣೆ ಮಾಡಿದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

9 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

19 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago