ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರ ಮಧ್ಯಸ್ಥಿಕೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಅಜಯ್ ಕುಮಾರ್, ರಾಜ್ಯ ಪರಿಷತ್ ಸ್ಥಾನಕ್ಕೆ ಕುಡಿಯುವ ನೀರು ನೈಮಲ್ಯ ಇಲಾಖೆಯ ಶ್ರೀನಿವಾಸರೆಡ್ಡಿ, ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಮುರಳಿ ಮೋಹನ್ ಅವರನ್ನು ಸ್ಪರ್ಧೆ ಮಾಡಲು ಅವಕಾಶ ನೀಡಲಾಗಿದೆ.
ಇದೇ ಮೊದಲ ಬಾರಿಗೆ ಸರ್ಕಾರಿ ನೌಕರರ ಸಂಘದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರು ಜಿಲ್ಲೆಯ ಎಲ್ಲಾ ಶಾಸಕರೊಂಂದಿಗೆ ಚರ್ಚಿಸಿ ಎಲ್ಲರ ವಿಶ್ವಾಸವನ್ನು ಪಡೆದು ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಸಾಮಾಜಿಕ ನ್ಯಾಯವನ್ನು ನೀಡಲಾಗಿದೆ ಇದೇ ಮೊದಲ ಬಾರಿಗೆ ನೌಕರರ ಸಂಘದಲ್ಲಿ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ದಲಿತ ಸಮುದಾಯಕ್ಕೆ ನೀಡಿದ್ದು ಅಜಯ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಹಿಂದೆ ಕುರುಬರು, ಒಕ್ಕಲಿಗರು, ವಹ್ನಿಕುಲ, ಯಾದವ, ಬಲಿಜಗರು ಅಧ್ಯಕ್ಷರಾಗಿ ಆಯ್ಕೆಯಾದ ಉದಾಹರಣೆ ಇದ್ದು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರ ಮಧ್ಯಸ್ಥಿಕೆಯಿಂದಾಗಿ ದಲಿತರಿಗೆ ಅವಕಾಶ ನೀಡಲಾಗಿದೆ.
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ನಾಮಪತ್ರ ಸಲ್ಲಿಸುವ ಮುಂಚೆ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಯ ಪಕ್ಕದಲ್ಲಿರುವ ಶಾಸಕರ ಅಥಿತಿ ಗೃಹದಲ್ಲಿ ಸರ್ಕಾರಿ ನೌಕರರ ಸಂಘದ ಪ್ರಮುಖರೊಂದಿಗೆ ಚರ್ಚಿಸಿ ಈ ಆಯ್ಕೆ ಮಾಡಲಾಯಿತು ಅಧ್ಯಕ್ಷರು, ರಾಜ್ಯ ಪರಿಷತ್, ಖಜಾಂಚಿ ಸ್ಥಾನಗಳು ಸೇರಿದಂತೆ ಉಳಿದ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ಸಮುದಾಯಗಳಿಗೆ ಅವಕಾಶ ನೀಡಲು ಸಂಘದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.