TAPMCS Election:ಶಾಸಕ ಧೀರಜ್ ಮುನಿರಾಜ್ ವಿರುದ್ಧ ಹುಸ್ಕೂರ್ ಆನಂದ್ ಆಕ್ರೋಶ: ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ- ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್

ಶಾಸಕ ಧೀರಜ್ ಮುನಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್, ಟಿಎಪಿಎಂಸಿಎಸ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ (ಎನ್ ಡಿಎ) ಮೈತ್ರಿ ಘೋಷಣೆ ಆದ ಮೇಲೆ ವೋಟ್ ಹಾಕಿ‌. ಇಲ್ಲದಿದ್ದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ ಎಂದು ಹೇಳಿದರು.

ಎನ್ ಡಿ ಎ ಮಾಡಿಕೊಳ್ಳಬೇಕೆಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆದೇಶವಿದೆ. ಆದರೆ ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಅವರು ಅಸಂಬದ್ಧವಾಗಿ ಮೈತ್ರಿ ಮಾಡಿಕೊಂಡು ಜೆಡಿಎಸ್ ಮತದಾರರನ್ನು ದಿಕ್ಕುತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ….

ಏಕಪಕ್ಷೀಯವಾಗಿ ಅವರ ಇಚ್ಛೆಯಾಗಿ ಶಾಸಕ ಧೀರಜ್ ಮುನಿರಾಜ್ ನಡೆದುಕೊಳ್ಳುತ್ತಿದ್ದಾರೆ. ದೇವೇಗೌಡರ ಆದೇಶ ಉಲ್ಲಂಘನೆ ಮಾಡಿ ಮೈತ್ರಿ ಮಾಡಿಕೊಂಡು ನಮ್ಮಲ್ಲಿ‌ ಗೊಂದಲ ಸೃಷ್ಟಿ‌ ಮಾಡುತ್ತಿದ್ದಾರೆ ಎಂದರು.

ನಮ್ಮನೆಗೂ ಮೂರು ವೋಟ್ ಇವೆ.‌ ಇದೂವರೆಗೂ ನಮ್ಮನಗೆ ಬಿಜೆಪಿಯವರು ವೋಟ್ ಕೇಳೋದಕ್ಕೆ ಬಂದಿಲ್ಲ. ಕೇವಲ ಜೆಡಿಎಸ್ ನವರು ಬಂದಿದ್ದಾರೆ. ಇದನ್ನ ಎನ್ ಡಿಎ ಮೈತ್ರಿ ಅಂತಾರಾ ಎಂದು ಹೇಳಿದರು..

ಇದೂವೆರೆಗೂ ಎನ್ ಡಿಎ ಮೈತ್ರಿಕೂಟದ ಬಗ್ಗೆ ಪತ್ರಿಕಾಗೋಷ್ಠಿ ಮಾಡಿಲ್ಲ. ಮತದಾರರು, ರೈತರಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಎನ್ ಡಿಎ ಮೈತ್ರಿಯಾದರೆ ಎಲ್ಲರಿಗೂ ವೋಟ್ ಹಾಕಬಹುದು ನಮ್ಮದೇನು ಅಭ್ಯಂತರ ಇರುವುದಿಲ್ಲ. ಇಲ್ಲ ಅಂದ್ರೆ ನಮ್ಮ ಜೆಡಿಎಸ್ ನವರಿಗೆ ಮಾತ್ರ ವೋಟ್ ಹಾಕಿ ಎಂದು ತಿಳಿಸಿದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

48 minutes ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

13 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

15 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

17 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

17 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

19 hours ago