ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ನಡೆದಿದೆ.

ಕಾರಿನಲ್ಲಿ ಸನ್‌ರೂಫ್ ಮೂಲಕ ಹೊರಬಂದು ಬೆಂಬಲಿಗರತ್ತ ಕೈಬೀಸುತ್ತಿದ್ದ ವೇಳೆ ಕೆಲವರು ಪ್ರತಿಭಟನೆ ನಡೆಸಿ, ಶಾಸಕನ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಕೆಲ ಬೆಂಬಲಿಗರು ‘ಹುಚ್ಚ, ಹುಚ್ಚ’ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.

ಪ್ರತಿಭಟನಾಕಾರರ ವರ್ತನೆಗೆ ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು ಕಾರಿನ ಮೇಲೆಯೇ ನಿಂತು ಮೀಸೆ ತಿರುವಿ ತೊಡೆ ತಟ್ಟುವ ಮೂಲಕ ಸವಾಲಿನ ಭಂಗಿ ಪ್ರದರ್ಶಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲವರು ಶಾಸಕನ ಕಾರಿನತ್ತ ಚಪ್ಪಲಿ ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸಿದರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

9 seconds ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

4 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

5 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

11 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

11 hours ago

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

1 day ago