ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು, ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್ ನೀಡಿದೆ.
ರಾಜ್ಯ ಬಿಜೆಪಿ ಸರ್ಕಾರ ಅಡಿಯಿಂದ ಮುಡಿವರೆಗೆ 40% ಕಮಿಷನ್‌ನಲ್ಲಿ ಮುಳುಗಿದೆ ಎಂಬ ನಮ್ಮ ಆರೋಪಗಳಿಗೆ ದಾಖಲೆ ಕೇಳುತ್ತಿದ್ದ ಮುಖ್ಯಮಂತ್ರಿಗಳಿಗೆ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಲಂಚ ಪಡೆಯುವಾಗ ಹಣದ ಸಮೇತ ಸಿಕ್ಕಿಬಿದ್ದ ದಾಖಲೆ ಸಾಕಲ್ಲವೇ?
ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಘನತೆ, ಗೌರವವನ್ನಾದರೂ ಉಳಿಸಲಿ ಎಂದು ಒತ್ತಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್ ಮಾಡಿದ್ದಾರೆ. ನನ್ನ ಪ್ರಕಾರ ಬೊಮ್ಮಾಯಿ ಈಗಾಗಲೇ ರಾಜೀನಾಮೆ ಕೊಟ್ಟುಬಿಡಬೇಕಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕ ನಾವು? ದೇಶದ ದುರಂತ ನೋಡ್ರೀ.
ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರಾ?
“ಸಾಕಪ್ಪ ಸಾಕು 40% ಸರ್ಕಾರ” ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್ ಹಗರಣದ ಬಗ್ಗೆ ಮಾತನಾಡಿ ಸರ್ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ.
ಅದಕ್ಕೆ ನಿನ್ನೆ ಬೆಳಗಾವಿಯಲ್ಲಿ ಕೂಡಲೇ ಚುನಾವಣೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದೆ, ಚುನಾವಣಾ ನೀತಿ ಸಂಹಿತೆ ಘೋಷಣೆ ಆದರೆ ಇವರು ಲಂಚ ಹೊಡೆಯುವುದಾದರೂ ನಿಲ್ಲುತ್ತೆ, ಗುತ್ತಿಗೆದಾರರ ಸುಲಿಗೆ ನಿಲ್ಲುತ್ತೆ. ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊನೆಯ 6 ತಿಂಗಳಿಂದ ಟೆಂಡರ್ ನೀಡಿರುವ ಕಾಮಗಾರಿಗಳನ್ನು ಪುನರ್ ಪರಿಶೀಲನೆಗೆ ಒಳಪಡಿಸುತ್ತೇವೆ. ಯಾವುದೇ ಗುತ್ತಿಗೆದಾರರು ಈಗ ಲಂಚ ನೀಡಿ ಗುತ್ತಿಗೆ ಕೆಲಸ ಹಿಡಿಯಬೇಡಿ, ಕಾರಣ ನಾವು ಬಂದ ಮೇಲೆ ಆ ಎಲ್ಲಾ ಕಾಮಗಾರಿಗಳನ್ನು ರದ್ದು ಮಾಡುತ್ತೇವೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…