ಶಾಸಕ ಯತ್ನಾಳ್ ಉಚ್ಚಾಟನೆ ವಿಚಾರ: ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಏನಂದ್ರು…?

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ Basanagouda Patil Yatnal ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ.
ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

24 minutes ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

2 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

9 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

20 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago