ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ; ಮಾ.9 ರಂದು ಕೆಪಿಸಿಸಿಯಿಂದ 2 ಗಂಟೆ ಸ್ವಯಂಪ್ರೇರಿತ ಕರ್ನಾಟಕ ಬಂದ್

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನ ವಿರೋಧಿಸಿ ಹಾಗೂ ಶಾಸಕ‌ ವಿರುಪಾಕ್ಷಪ್ಪ‌ ಮಾಡಾಳ್ ಬಂಧನಕ್ಕೆ ಒತ್ತಾಯಿಸಿ ಮಾ.9 ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಎರಡು‌ ಗಂಟೆಗಳ ಕಾಲ ಸ್ವಯಂಪ್ರೇರಿತ ಬಂದ್ ಆಚರಿಸಲಾಗುವುದು‌ ಎಂದು ಕೆಪಿಸಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷೀಪತಿ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ‌ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ‌ ಸೇವೆ ಹೊರತುಪಡಿಸಿ ಎಲ್ಲ ರೀತಿಯ ವ್ಯಾಪಾರ ವಹಿವಾಟು ಸ್ಥಳಿತಗೊಳಿಸಲಾಗುವುದು. ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ‌ ಮಾಡಿ, ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸಲಾಗುವುದು. ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಅವರಿಗೆ ಮನವಿ‌ ಸಲ್ಲಿಸಲಾಗುವುದು ಎಂದರು.

ಬಿಜೆಪಿ ಶಾಸಕರ ಕಚೇರಿ ಹಾಗೂ ಮನೆಯಲ್ಲಿ ಅಕ್ರಮ ಹಣ ಪತ್ತೆಯಾದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. 40 ಪರ್ಸೆಂಟ್ ಕಮಿಷನ್ ಆರೋಪ ಋಜುವಾತಾದರೂ ಪೊಲೀಸ್ ಇಲಾಖೆ ಆರೋಪಿತ ಶಾಸಕರನ್ನು ಬಂಧಿಸಿಲ್ಲ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ. ಎರಡು ಗಂಟೆಗಳ ಕಾಲ‌ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

40% ಕಮಿಷನ್ ವಸೂಲಿ‌ ಮಾಡುವ ಕುರಿತಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಖಾಸಗಿ ಅನುದಾನರಹಿತ ಶಾಲಾ‌ ಕಾಲೇಜುಗಳ ಸಂಘ(ರುಕ್ಸಾ), ಮಠಾಧೀಶರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈಗ ಶಾಸಕರ ಪುತ್ರ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಶಾಸಕರ ದೂರವಾಣಿ‌ ಸಂಭಾಷಣೆ ಕೂಡ ಇದೆ. ಮುಖ್ಯಮಂತ್ರಿಗಳು ಇನ್ನೂ ದಾಖಲೆ, ಸಾಕ್ಷಿ ಕೇಳುವುದಾದರೆ ಇದಕ್ಕಿಂತ ನಾಚಿಕೆಕೇಡು ಬೇರೊಂದಿಲ್ಲ ಆರೋಪ‌ ಮಾಡಿದ್ದರು. ಸಿಎಂ ದಾಖಲೆ, ಸಾಕ್ಷಿ ಕೇಳಿದ್ದರು.

ಕರ್ನಾಟಕ‌ಸಾಬೂನು‌ ಮತ್ತು‌ಮಾರ್ಜಕ ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ದಾಕಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ಲೊಕಾಯುಕ್ತರ ವಶಪಡಿಸಿರುವ ದಾಖಲೆಗಳೇ ಸಾಕ್ಷಿ. ಇದಕ್ಕಿಂತ ಬೇರೆ ದಾಖಲೆ ಕೇಳಿದರೆ ಅದಕ್ಕಿಂತ ನಾಚಿಕೆ ಬೇರೊಂದಿಲ್ಲ‌ ಎಂದು ಕಿಡಿಕಾರಿದರು.

ಮಾ.9 ರಂದು ಸಾಂಕೇತಿಕವಾಗಿ ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು. ಅಷ್ಟರಲ್ಲಿ ಶಾಸಕರನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಂದಿನಂತೆ ಶಾಲಾ, ಕಾಲೇಜು, ವೈದ್ಯಕೀಯ ಸೇವೆ, ಸಾರಿಗೆ ಕಾರ್ಯನಿರ್ವಹಿಸಲಿವೆ.

ಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಬಿ.ಜಿ. ಹೇಮಂತರಾಜು, ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆಂಪಣ್ಣ, ರಮೇಶ್, ಮಂಜುನಾಥ್, ಕುಮಾರ್, ಅಖಿಲೇಶ್ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

8 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

14 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

1 day ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago