ಶಾಸಕ ವೆಂಕಟರಮಣಯ್ಯ ವಿರುದ್ಧ ದೇವಾಂಗ ಸಮಾಜ ಆಕ್ರೋಶ; ದೇವಾಂಗ ಮಂಡಳಿ ಅಧ್ಯಕ್ಷ ಎಂ.ಜಿ ಶ್ರೀನಿವಾಸ್ ಉಚ್ಚಾಟನೆಗೆ ಸಿಡಿದೆದ್ದ ಸಮುದಾಯ: ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದ ದೇವಾಂಗ ಸಮುದಾಯ ಮುಖಂಡರ ಎಚ್ಚರಿಕೆ

ದೇವಾಂಗ ಸಮುದಾಯವನ್ನು ಪ್ರತಿ ಹಂತದಲ್ಲಿಯೂ ಕಡೆಗಣನೆ ಮಾಡಿ ದೇವಾಂಗ ಸಮಾಜದ ಮುಖಂಡರನ್ನು ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತಿರುವ ಶಾಸಕ ವೆಂಕಟರಮಣಯ್ಯ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ನಮ್ಮ ಸಮಾಜ ಮುಂದಿನ ದಿನಗಳಲ್ಲಿ ಶಾಸಕರಿಗೆ ತಕ್ಕಪಾಠ ಕಲಿಸುತ್ತದೆ ಎಂದು ದೇವಾಂಗ ಮಂಡಳಿ ಮಾಜಿ ಅಧ್ಯಕ್ಷ ಕೆ.ಜಿ ದಿನೇಶ್ ಹೇಳಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ದೇವಾಂಗ ಸಮಾಜ ಅತ್ಯಂತ ಹೆಚ್ಚಿನ ಮತದಾರರನ್ನು ಹೊಂದಿದೆ. ನಮ್ಮ ಸಮಾಜದ ನಾಯಕರು ಎಲ್ಲಾ ಪಕ್ಷಗಳಲ್ಲಿ ಗುರುತಿಸಿಕೊಂಡು ಉನ್ನತ ಸ್ಥಾನದಲ್ಲಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಮುಖಂಡರು ಮತ್ತು ದೇವಾಂಗ ಮಂಡಳಿ ಹಾಲಿ ಅಧ್ಯಕ್ಷರಾಗಿರುವ ಎಂ.ಜಿ ಶ್ರೀನಿವಾಸ್ ಅವರನ್ನು ಏಕಾಏಕಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ದೇವಾಂಗ ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ.

2013ರ ಚುನಾವಣೆಯಲ್ಲಿ ಇದೇ ಎಂ.ಜಿ.ಶ್ರೀನಿವಾಸ್ ಅವರ ಪರಿಶ್ರಮದಿಂದ ನಗರ ಭಾಗದಲ್ಲಿ ದೇವಾಂಗ ಸಮಾಜದ ಅತ್ಯಂತ ಹೆಚ್ಚಿನ ಮತ ಕಾಂಗ್ರೆಸ್ ಕಡೆ ವಾಲಿತ್ತು. ಇದೀಗ ನಮ್ಮ ಸಮಾಜದ ಮುಖಂಡರನ್ನು ಮೂಲೆಗುಂಪು ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಂದ ಒಡೆದು ಆಳುವ ನೀತಿ

ನಮ್ಮ ಸಮಾಜದ ಮುಖಂಡರನ್ನ ಶಾಸಕ ವೆಂಕಟರಮಣಯ್ಯ ಬಳಸಿಕೊಂಡು ನಮ್ಮ ಸಮಾಜದ ಮುಖಂಡರ ವಿರುದ್ಧವೇ ಎತ್ತಿ ಕಟ್ಟಿ ದೇವಾಂಗ ಸಮುದಾಯವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಎಲ್ಲಾ ಹಂತದ ಮುಖಂಡರನ್ನು ತುಳಿಯುವ ಹೇಯ ಕೃತ್ಯ ಮಾಡುತ್ತಿದ್ದಾರೆ. ನಗರಸಭೆ ಚುನಾವಣೆಯಲ್ಲೂ ದೇವಾಂಗ ಸಮಾಜದ ಸ್ವಪಕ್ಷೀಯ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದಾರೆ. ದೇವಾಂಗ ಸಮಾಜವನ್ನು ಹೀನಾಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಮುಂದೆ ನಮ್ಮ ಎಲ್ಲಾ ಹಿರಿಯ ಕುಲಬಾಂಧವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನಗರಸಭಾ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್ ಆಕ್ರೋಶ ವ್ಯಕ್ತಪಡಿಸಿದರು.

ದೇವಾಂಗ ಸಮಾಜಕ್ಕೆ ಅಪಮಾನ

ಶಾಸಕ ವೆಂಕಟರಮಣಯ್ಯ ದೇವಾಂಗ ಸಮಾಜದ ಹಿರಿಯ ನಾಯಕರಿಗೆ ಅಪಮಾನ ಮಾಡಿದ್ದಾರೆ. ಎಂ.ಜಿ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿ ಸಂಘಟಿಸಿದವರಲ್ಲಿ ಪ್ರಮುಖರು, ಅವರನ್ನು ಏಕಾಏಕಿ ಅವರನ್ನು ತೆಗೆದುಹಾಕಿರುವುದು ಸರಿಯಲ್ಲ. ಪಕ್ಷದ ವಿರುದ್ಧ ಅವರು ಮಾತನಾಡಿಲ್ಲ. ಬದಲಾಗಿ ಶಾಸಕರ ವಿರುದ್ಧ ಅವರು ಮಾತನಾಡಿರುವುದು. ಸ್ವಾಭಿಮಾನಿ ಕಾಂಗ್ರೆಸ್ ಮುಖಂಡರು ಮಾತನಾಡಿರುವುದನ್ನೇ ಎಂಜಿ ಶ್ರೀನಿವಾಸ್ ಮಾತನಾಡಿರುವುದು. ಆದರೆ ಅವರ ವಿರುದ್ಧ ಕ್ರಮವಿಲ್ಲ. ಸ್ವಜಾತಿ ನಾಯಕರನ್ನು ಉಳಿಸಿಕೊಂಡು ದೇವಾಂಗ ಸಮಾಜದ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಮಾಜಿ ತೆಲುಗು ದೇವಾಂಗ ಸಮಾಜದ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಕೇಶವ ಮೂರ್ತಿ, ಅಮರನಾಥ್, ಸರೋಜಮ್ಮ,ಲಕ್ಷ್ಮಿಪತಿ, ನಿರ್ಮಲಾ, ಸುಧಾ, ನಟರಾಜ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

2 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

18 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

19 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago