ಶಾಸಕ ಸ್ಥಾನ ವಂಚಿತ ಕೆ.ಶ್ರೀನಿವಾಸಗೌಡರಿಗೆ ಸೂಕ್ತ ಸ್ಥಾನಮಾನಕ್ಕೆ ಊರಬಾಗಿಲು ಶ್ರೀನಿವಾಸ್ ಒತ್ತಾಯ

ಕೋಲಾರ: ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಅಂತಾರಾಷ್ಟ್ರೀಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರು ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಅವರ ತ್ಯಾಗಕ್ಕೆ ಸೂಕ್ತ ಸ್ಥಾನಮಾನವನ್ನು ನೀಡಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಸೋಮವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಫ್ಕೋ ಸಂಸ್ಥೆಗೆ ಸತತವಾಗಿ ಏಳನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಕೆ.ಶ್ರೀನಿವಾಸಗೌಡರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಹಕಾರಿ ಧುರೀಣರಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋಲಾರ ಕ್ಷೇತ್ರವನ್ನು ಗುರುತಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತವನ್ನು ಹೊಂದಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಕಾರಣದಿಂದ ನಿಲ್ಲುವುದಿಲ್ಲ ಎಂದರು ಆಗ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡಬೇಕಾಗಿತ್ತು ಆದರೂ ಅವರು ತ್ಯಾಗ ಮಾಡಿ ಬೇರೆಯವರಿಗೆ ಬಿಟ್ಟು ಕೊಟ್ಟು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಿದ್ದಾರೆ. ಅಂತಹವರಿಗೆ ಮುಂದಿನ ದಿನಗಳಲ್ಲಿ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಕೆ.ಎಚ್ ಮುನಿಯಪ್ಪ ಕಾಂಗ್ರೆಸ್ ನಾಯಕರು ಅವರನ್ನು ಎಂಎಲ್ಸಿ ಮಾಡಿ ನ್ಯಾಯ ಒದಗಿಸಬೇಕಾಗಿದೆ ಎಂದರು.

ಕೋಲಾರ ತಾಲೂಕಿನ ಅಣ್ಣಿಹಳ್ಳಿ ಸೊಸೈಟಿ ಮೂಲಕ ಸಹಕಾರಿ ಕ್ಷೇತ್ರಕ್ಕೆ ಬಂದು ತಾಲೂಕು ಜಿಲ್ಲಾ ಪರಿಷತ್ ಸೇರಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯದಲ್ಲಿ ಕೃಷಿ ಸಚಿವರಾಗಿ ಕೆಲಸ ಮಾಡಿದ್ದಾರೆ. ನವದೆಹಲಿಯ ಇಫ್ಕೋ ಸಂಸ್ಥೆಗೆ ಸತತವಾಗಿ ಏಳನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇವರು ಸಂಸ್ಥೆಯ ಅಧ್ಯಕ್ಷರಾಗಿ ರೈತರಿಗೆ ವಿಧ್ಯಾರ್ಥಿಗಳಿಗೆ ಶಿಕ್ಷಣ ಆರೋಗ್ಯಕ್ಕೆ ಆರ್ಥಿಕ ನೆರವು ನೀಡಿದ್ದಾರೆ. ತಮ್ಮ ಸಹಕಾರಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಯಾವುದೇ ಕಪ್ಪುಚುಕ್ಕೆ ತರದ ರೀತಿಯಲ್ಲಿ ತಮ್ಮದೇ ಆದ ಹಿಡಿತವನ್ನು ಸಾಧಿಸಿದ್ದಾರೆ ಇಂತಹವರಿಗೆ ಸರಕಾರ ಗುರುತಿಸಿ ಸೂಕ್ತ ಸ್ಥಾನಮಾನವನ್ನು ನೀಡಬೇಕಾಗಿದೆ ಎಂದು ಸರಕಾರವನ್ನು ಒತ್ತಾಯಿಸಿದರು

ಈ ಸಂದರ್ಭದಲ್ಲಿ ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಮುಖಂಡರಾದ ನಾಗರಾಜಗೌಡ, ಹಾರೋಹಳ್ಳಿ ಶ್ರೀನಿವಾಸ್, ನಾಗೇಶ್, ರಾಮಣ್ಣ, ತ್ಯಾಗರಾಜ್, ಹರೀಶ್ ಮುಂತಾದವರು ಇದ್ದರು.

Leave a Reply

Your email address will not be published. Required fields are marked *