ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.
ಅದರಂತೆ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸೆಪ್ಟೆಂಬರ್ 30 ರಂದು ಪ್ರಕಟಣೆ ಹೊರಡಿಸಲಾಗಿದೆ. ನಮೂನೆ 19 ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 25 ರಂದು ಪ್ರಕಟಿಸಲಾಗುತ್ತಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೆ ಕಾಲಾವಕಾಶವಿದೆ. ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-19ರ ಅರ್ಜಿಗಳನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ
1)ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಮುಕ್ತಾಂಬಿಕ ರಸ್ತೆ, ವಡ್ಡರಪೇಟೆ, ಕಚೇರಿ ದೂರವಾಣಿ ಸಂಖ್ಯೆ 080-27622208, ಮೊಬೈಲ್ ನಂ: 9480695013.
2)ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ತಾಲ್ಲೂಕು ಕಚೇರಿ ರಸ್ತೆ ದೊಡ್ಡಬಳ್ಳಾಪುರ ಕಚೇರಿ ದೂರವಾಣಿ ಸಂಖ್ಯೆ 080-27622002, ಮೊಬೈಲ್ ನಂ: 9448346792 ಸ್ವೀಕರಿಸಲಿದ್ದಾರೆ.
ದೇವನಹಳ್ಳಿ ತಾಲ್ಲೂಕಿನಲ್ಲಿ 1)ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಬಿ.ಬಿ ರಸ್ತೆ ಗುರು ಭವನ, ದೇವನಹಳ್ಳಿ. ಕಚೇರಿ ದೂರವಾಣಿ ಸಂಖ್ಯೆ 080-27682384, ಮೊಬೈಲ್ ನಂ: 9480695012.
2) ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ. ಬಿ.ಬಿ. ರಸ್ತೆ, ದೇವನಹಳ್ಳಿ ಕಚೇರಿ ದೂರವಾಣಿ ಸಂಖ್ಯೆ 080-22122999, ಮೊಬೈಲ್ ನಂ:6363263117 ಸ್ವೀಕರಿಸಲಿದ್ದಾರೆ.
ಹೊಸಕೋಟೆ ತಾಲ್ಲೂಕಿನಲ್ಲಿ
1)ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಛೇರಿ. ಮಿಷನ್ ಆಸ್ಪತ್ರೆ ರಸ್ತೆ, ಬೈರೇಗೌಡ ಪೆಟ್ರೋಲ್ ಬಂಕ್ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931311 ಮೊಬೈಲ್ ನಂ: 9480695014.
2)ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಹಳೆ ಬಸ್ ನಿಲ್ದಾಣ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931237,ಮೊಬೈಲ್ ನಂ:9845637542
ನೆಲಮಂಗಲ ತಾಲ್ಲೂಕಿನಲ್ಲಿ
1)ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ಓ ಕಛೇರಿ, ಗುರು ಭವನ, ನೆಲಮಂಗಲ ಬಸ್ ನಿಲ್ದಾಣ ಹತ್ತಿರ, ನೆಲಮಂಗಲ ಮೊಬೈಲ್ ನಂ: 9480695015
2)ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಬಿ ಹೆಚ್ ರಸ್ತೆ, ನೆಲಮಂಗಲ ಕಚೇರಿ ದೂರವಾಣಿ ಸಂಖ್ಯೆ:080-27722126, ಮೊಬೈಲ್ ನಂ: 8147397189
*ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾನದಂಡಗಳು*
ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಸಾಮಾನ್ಯ ನಿವಾಸಿ ಆಗಿರಬೇಕು (ಈ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಿರುತ್ತದೆ)
ಅರ್ಹತಾ ದಿನಾಂಕ ಹಿಂದಿನ 6 ವರ್ಷಗಳ ಅವಧಿಯ ಪೈಕಿ ಕನಿಷ್ಟ 3 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ/ಮಾನ್ಯತೆ ಹೊಂದಿರುವುದಾಗಿ ಘೋಷಿಸಲ್ಪಟ್ಟಿರುವ ಸೆಕೆಂಡರಿ ಶಾಲೆಗಿಂತ ಕಡಿಮೆ ಇಲ್ಲದ ಯಾವುದೇ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಕಾರ್ಯ ನಿರ್ವಹಿಸಿರಬೇಕು.
ಸೆಕೆಂಡರಿ ಶಾಲೆ ಅಂದರೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು.
ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಖಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಹಾಗೂ ಪಾರ್ಟ್ ಟೈಂ’ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ನೋಂದಣಿಗೆ ಅವಕಾಶವಿರುವುದಿಲ್ಲ.
*ಸಹಾಯವಾಣಿ ಕೇಂದ್ರಗಳು*
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರವರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ-080-29902025. ಚುನಾವಣಾಧಿಕಾರಿ ಯವರ ಕಚೇರಿ, 178-ಹೊಸಕೋಟೆ ವಿಧಾನಸಭಾ ಕ್ಷೇತ್ರ ದೂ.ಸಂ-080-27931237. ಚುನಾವಣಾಧಿಕಾರಿಯವರ ಕಚೇರಿ, 179-ದೇವನಹಳ್ಳಿ ವಿಧಾನಸಭಾಕ್ಷೇತ್ರ ದೂ.ಸಂ-080-22122999. ಚುನಾವಣಾಧಿಕಾರಿಯವರ ಕಚೇರಿ, 180-ದೊಡ್ಡಬಳ್ಳಾಪುರ ವಿಧಾನಸಭಾಕ್ಷೇತ್ರ
ದೂ.ಸಂ-080-27622002.
ಚುನಾವಣಾಧಿಕಾರಿಯವರ ಕಚೇರಿ, 181-ನೆಲಮಂಗಲ ವಿಧಾನಸಭಾ ಕ್ಷೇತ್ರ ದೂ.ಸಂ-080-27722126
ಅರ್ಜಿದಾರರು ಶಿಕ್ಷಕ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಂದ ದೃಢೀಕೃತ ದಾಖಲೆ/ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಮತದಾರರ ಪಟ್ಟಿ ನೋಂದಣಿಗೆ ಅರ್ಜಿದಾರರ ವಾಸಸ್ಥಳವು ಅರ್ಹತೆಯಾಗಿದ್ದು, ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯ ಸ್ಥಳವು ಪರಿಗಣಿಸಲ್ಪಡುವುದಿಲ್ಲ.
ಮತದಾರರ ಪಟ್ಟಿ ಸೇರ್ಪಡೆಗೆ ಕನ್ನಡ ಅಥವಾ ಅಂಗ್ಲ ಭಾಷೆಯ ನಮೂನೆ-19 ರಲ್ಲಿ ಅರ್ಜಿ ಸಲ್ಲಿಸಬಹುದು
ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುವುದರಿಂದ ಅರ್ಜಿದಾರರು 2 ಇತ್ತೀಚಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಇಲಾಖಾ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಶಿಕ್ಷಕರಿಂದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…