ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ 2023ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಇಂದು(ನವೆಂಬರ್ 23) ಪ್ರಕಟಗೊಳಿಸಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಡಿಸೆಂಬರ್ 09 ರೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ-2023 ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ 2023 ರ ಸೆಪ್ಟೆಂಬರ್ 30ರಂದು ಸಾರ್ವಜನಿಕವಾಗಿ ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅಕ್ಟೋಬರ್ 01 ರಿಂದ ನವೆಂಬರ್ 06 ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರಡು ಮತದಾರರ ಪಟ್ಟಿಯನ್ನು ಇಂದು(2023 ರ ನವೆಂಬರ್ 23) ಜಿಲ್ಲೆ, ಉಪವಿಭಾಗ, ತಾಲೂಕು ಕಚೇರಿಗಳಲ್ಲಿ, ನಾಡಕಚೇರಿಗಳಲ್ಲಿ, ಪುರಸಭೆ, ನಗರಸಭೆ ಮತ್ತು ಎಲ್ಲಾ ಸಾರ್ವಜನಿಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ 2023ರ ಡಿಸೆಂಬರ್ 09ರೊಳಗಾಗಿ ಆಯಾ ತಾಲೂಕಿನ ತಾಹಶೀಲ್ದಾರ್ ಹಾಗೂ ಸಹಾಯಕ ಮತದಾನದ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. ಅಂತಿಮ ಮತದಾರರ ಪಟ್ಟಿಗಳನ್ನು ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದು ಹೇಳಿದರು.
ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯಂತೆ ಇದುವರೆಗೂ 855 ಪುರುಷ ಶಿಕ್ಷಕರು ಹಾಗೂ 266 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 1721 ಶಿಕ್ಷಕರು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.
ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿರುವಂತೆ ಇದುವರೆಗೆ 7509 ಪುರುಷ ಮತದಾರರು ಹಾಗೂ 6864 ಮಹಿಳಾ ಮತದಾರರು ಸೇರಿ 14375 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಹಾಗೂ ಇಲಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಅರ್ಹ ಪದವೀಧರರು ಹಾಗೂ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ ಶಿವಶಂಕರ.ಎನ್ ಅವರು ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…