Categories: ಕೋಲಾರ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿಯೇ ಕೋಲಾರ ತಾಲೂಕಿನ ಕಾಲೇಜುಗಳಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಜನಪರ ಆಡಳಿತ ಹಾಗೂ ಸರ್ವರಿಗೂ ಅನುಕೂಲವಾಗುವಂತ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಬಹುಮತ ಅನಿವಾರ್ಯವಿದ್ದು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು

ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಬುಧವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಪರವಾಗಿ ಚುನಾವಣಾ ಪೂರ್ವಭಾವಿ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶವು ಅಭಿವೃದ್ಧಿಯಾಗಲು ಶಿಕ್ಷಣ, ಆರೋಗ್ಯ ಮತ್ತು ರೈತರಿಗೆ ಮೊದಲ ಅಧ್ಯತೆ ನೀಡಬೇಕಾಗಿದೆ ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಅಭಿವೃದ್ಧಿಯ ದೃಷ್ಟಿಯಿಂದ ಬಹಳಷ್ಟು ಕೊಡುಗೆಗಳನ್ನು ನೀಡಿದೆ. ಸಿದ್ದರಾಮಯ್ಯನವರು ಯಾವುದೇ ಧರ್ಮ, ಜಾತಿಗೆ ಸೀಮಿತವಾಗದೆ ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ರೂಪಿಸಿದ್ದಾರೆ. ಹೀಗಾಗಿ ಡಿ.ಟಿ ಶ್ರೀನಿವಾಸ್ ಅವರನ್ನು ಗೆಲ್ಲಿಸಿ ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದರು.

ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು 7 ನೇ ವೇತನ ಆಯೋಗದ ಸಿದ್ದತೆಯೂ ಕಾಂಗ್ರೆಸ್ ಸರ್ಕಾರದ ಚಿಂತನೆಯಾಗಿದೆ. ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ಕ್ಷೇತ್ರವು ಅಭಿವೃದ್ದಿಯಾಗಬೇಕಿದೆ. ಶೈಕ್ಷಣಿಕ ಕಾರ್ಯಕ್ರಮಗಳ ಜೊತೆಗೆ ಜನಪರವಾದ ಕಾರ್ಯಕ್ರಮಗಳನ್ನು ರೂಪಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಬೆಂಬಲಿಸಿ ಅವರನ್ನು ವಿಧಾನ ಪರಿಷತ್ತಿಗೆ ಕಳಸಿಕೊಡಿ ಎಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಸಮಸ್ಯೆಗಳನ್ನು ಹೇಗೆ ಪರಿಹಾರ ಮಾಡಬೇಕು ಎಂಬುದು ಅವರಿಗೆ ತಿಳಿದಿದೆ ಇಂತಹವರು ವಿಧಾನಪರಿಷತ್‌ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರನ್ನು ಜಿಲ್ಲೆಗೆ ಕರೆತಂದು ಶೈಕ್ಷಣಿಕ ಅಭಿವೃದ್ಧಿಗೆ ಗಮನ ಹರಿಸಲಾಗುತ್ತದೆ ಎಂದರು.

ಕ್ಷೇತ್ರದಲ್ಲಿ ಸುಮಾರು 18 ವರ್ಷಗಳಿಂದ ಆಯ್ಕೆಯಾಗಿದ್ದವರು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಿಲ್ಲ ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಶಿಕ್ಷಣವನ್ನು ಅದೋಗತಿಗೆ ತಂದು ಕೂರಿಸಿದ್ದಾರೆ.ಆದರೆ ಕಾಂಗ್ರೆಸ್ ನೇತೃತ್ವದ ಸರಕಾರವು ಬೌದ್ಧಿಕವಾಗಿ ಮಕ್ಕಳು ಬೆಳೆಯಬೇಕು ಎಂಬ ಆಶಯದೊಂದಿಗೆ ಖಾಲಿ ಶಿಕ್ಷಕರ ಹುದ್ದೆಗಳನ್ನು ತುಂಬಲು ಮುಂದಾಗಿದೆ.ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ ಸರಕಾರದ ಪರವಾಗಿ ಇದ್ದವರನ್ನು ಆಯ್ಕೆ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಮತ್ತು ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಹೂಹಳ್ಳಿ ಎಕ್ಸ್ ಲೆಂಟ್ ರಂಗಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ವೈ.ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಸೇರಿದಂತೆ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಇದ್ದರು.

Ramesh Babu

Journalist

Recent Posts

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

1 hour ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

2 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

12 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

23 hours ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

24 hours ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

1 day ago