ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಾಲೆಗೆ ಬಂದಿಲ್ಲ ಎಂದು ಶಿಕ್ಷಕಿ ಮಂಜುಳ ಪ್ರಶ್ನೆ ಮಾಡಿದ ಕಾರಣ ವಿಧ್ಯಾರ್ಥಿ ತಂದೆ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯವಾಗಿದ್ದು ಕೂಡಲೇ ಹಲ್ಲೆಗೆ ಮಾಡಿದ ಚೌಡಪ್ಪ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿ ಅವರು ಪೋಷಕರು ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಬದಲಾಗಿ ಶಾಲೆಗೆ ಬಂದು ಶಿಕ್ಷಕಿ ಮಂಜುಳ ಮೇಲೆಯೇ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಗತಿಯಿಂದ ಹೊರಗೆ ತಳ್ಳಿದ್ದು ಗಾಯಗಳು ಆಗಿದೆ ಹಲ್ಲೆ ಮಾಡಿದ ವಿಧ್ಯಾರ್ಥಿ ತಂದೆ ಚೌಡಪ್ಪನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು.
ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅದರಲ್ಲಿಯೂ ಶಿಕ್ಷಕ ನೌಕರರ ಮೇಲೆ ಸಣ್ಣಪುಟ್ಟ ಕಾರಣಗಳಿಗಾಗಿ ಪದೇ ಪದೇ ಹಲ್ಲೆ ನಡೆಯುತ್ತಿದ್ದು, ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯವಾಗುತ್ತಿದೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರವು ಕಾನೂನು ರೂಪಿಸಬೇಕು ಎಂದು ಅಧ್ಯಕ್ಷ ಅಜಯ್ ಕುಮಾರ್ ಒತ್ತಾಯ ಮಾಡಿದ್ದಾರೆ
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
View Comments
ಸರ್ಕಾರಿ ನೌಕರರ ಮೇಲೆ ಈ ರೀತಿ ಹಲ್ಲೆ ನಿಜವಾಗಿಯೂ ಖಂಡನೀಯ ಇಂತವರಿಗೆ ಶಿಕ್ಷೆ ಆಗಲೇಬೇಕು