Categories: ಕೋಲಾರ

ಶಿಕ್ಷಣದ ಖಾಸಗೀಕರಣದ ವಿರುದ್ಧ ಎಸ್ಎಫ್ಐ ನಿರಂತರವಾಗಿ ಹೋರಾಟಕ್ಕೆ ಸಿದ್ಧ- ಅಂಬ್ಲಿಕಲ್ ಶಿವಪ್ಪ

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡುವ ಮೂಲಕ ಖಾಸಗೀಕರಣ ಮಾಡಲು ಹೊರಟಿದ್ದು ಇದರ ವಿರುದ್ದವಾಗಿ ಎಸ್ಎಫ್ಐ ಸಂಘಟನೆಯು ನಿರಂತರವಾಗಿ ವಿದ್ಯಾರ್ಥಿಗಳೊಂದಿಗೆ ಇದ್ದು ನಿರಂತರ ಹೋರಾಟಕ್ಕೆ ಸಿದ್ದವಿದೆ ಎಂದು ಸಂಘಟನೆಯ ನೂತನ ರಾಜ್ಯ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ಶೈಕ್ಷಣಿಕ ಕ್ಷೇತ್ರವು ಶ್ರೀಮಂತರ ಪಾಲಾಗುತ್ತಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ವಿದ್ಯಾರ್ಥಿಗಳು ಚಳವಳಿಯ ಮೂಲಕ ಸಮಾನ ಶಿಕ್ಷಣಕ್ಕಾಗಿ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.

ಸಮಾನ ಗುಣಮಟ್ಟದ ಶಿಕ್ಷಣಕ್ಕೆ ಸರಕಾರಗಳು ಬಜೆಟ್‌ನಲ್ಲಿ ಅಗತ್ಯ ಹಣ ಮೀಸಲಿರಿಸಬೇಕು.ಎಲ್ಲ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆ ಮತ್ತು ಮೂಲ ಸೌಲಭ್ಯಕ್ಕೆ ಉತ್ತೇಜನ ನೀಡಬೇಕು. ಸಂವಿಧಾನದ ಆಶಯದಂತೆ ವಿವಿಧತೆಯಲ್ಲಿ ಏಕತೆಯ ಸೌಹಾರ್ದ ಭಾರತ ನಿರ್ಮಾಣದ ಗುರಿ ಹೊಂದಲಾಗಿದೆ ಯಾವುದೇ ರೀತಿಯ ತಾರತಮ್ಯವಿಲ್ಲದ ಶೈಕ್ಷಣಿಕ ವಾತಾವರಣದ ನಿರ್ಮಾಣವಾಗಬೇಕು ಖಾಸಗಿ ರಂಗದಲ್ಲಿ ಮೀಸಲಾತಿಗೆ ಒತ್ತಾಯ. ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಐಕ್ಯತೆ ಉಳಿವಿಗಾಗಿ ಯೋಜನೆ ರೂಪಿಸುವುದು ಸಮ್ಮೇಳನದ ಮುಖ್ಯ ಧ್ಯೇಯಗಳಾಗಿವೆ ಎಂದು ತಿಳಿಸಿದರು.

ಸಂಘಟನೆಯ 16 ನೇ ರಾಜ್ಯ ಸಮ್ಮೇಳನವನ್ನು ಇತ್ತಿಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದಿದ್ದು ರಾಜ್ಯದಲ್ಲಿನ ಶೈಕ್ಷಣಿಕ ಮತ್ತು ಜನರ ಸಮಸ್ಯೆಗಳ ಈಡೇರಿಕೆಗಾಗಿ 16 ನಿರ್ಣಯಗಳು ಮತ್ತು ಕೋಲಾರ ಜಿಲ್ಲೆಯ ನೀರಾವರಿ, ಸರ್ಕಾರಿ ಮೆಡಿಕಲ್ ಕಾಲೇಜು, ಸೇರಿದಂತೆ ಜ್ವಲಂತ ಸಮಸ್ಯೆಗಳ ವಿರುದ್ದ ಧ್ವನಿ ಎತ್ತಲು ತೀರ್ಮಾನಿಸಲಾಗಿದೆ, 20 ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳು 51 ಜನರ ನೂತನ ರಾಜ್ಯ ಸಮಿತಿಯನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು ನೂತನ ರಾಜ್ಯ ಅಧ್ಯಕ್ಷರಾಗಿ ಕೋಲಾರದ ಅಂಬ್ಲಿಕಲ್ ಶಿವಪ್ಪ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಮೈಸೂರು ವಿಜಯಕುಮಾರ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾರ್, ಲಾವಣ್ಯ, ಜಿಲ್ಲಾ ಸಹಕಾರ್ಯದರ್ಶಿ, ಹರ್ಷಿತ ಮುಖಂಡರಾದ ಅರ್ಚಿತಾ ಇದ್ದರು.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

34 minutes ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

9 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

11 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

14 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

15 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

17 hours ago