ಶಿರಡಿ-ಅಯೋಧ್ಯೆ ಪ್ರವಾಸ ಮುಗಿಸಿ ಬರುತ್ತಿದ್ದ ಕುಮಟಾದ ವಾಹನದ ಮೇಲೆ ಸಿನಿಮೀಯ ರೀತಿ ದರೋಡೆ ಯತ್ನ!

ಕುಮಟಾ: ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ದರೋಡೆಕೋರರು ಲೂಟಿಗೆ ಯತ್ನಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ಕುಟುಂಬವೊಂದು, ಸ್ಥಳೀಯ ಗಜಾನನ ಟ್ರಾವೆಲ್ಸ್‌ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದಾಗ, ಶುಕ್ರವಾರ ರಾತ್ರಿ ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ.

ಕುಟುಂಬವಿದ್ದ ಟಿಟಿ ವಾಹನವನ್ನು ಮೂರು ಬೈಕ್‌ಗಳಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು, ಚಲಿಸುತ್ತಿದ್ದ ವಾಹನದ ಹಿಂದಿನ ಬಾಗಿಲಿಗೆ ಜಿಗಿದು ಒಳನುಗ್ಗಿದ್ದಾರೆ. ಬಳಿಕ ಹಿಂಬದಿಯಲ್ಲಿದ್ದ ಬ್ಯಾಗ್‌ಗಳನ್ನು ಎಳೆದು ಹೊರಗೆಸೆದಿದ್ದಾರೆ.  ನಡೆದ ಈ ಘಟನೆಯಿಂದ ವಾಹನದಲ್ಲಿದ್ದವರು ತೀವ್ರ ಆತಂಕಕ್ಕೆ ಒಳಗಾಗಿದ್ದರು.

ದರೋಡೆಕೋರರ ಕೃತ್ಯವನ್ನು ಗಮನಿಸಿದ ಚಾಲಕ ಗಣಪತಿ ನಾಯ್ಕ್, ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಆದರೆ, ಕಳ್ಳರು ಇಡೀ ವಾಹನವನ್ನೇ ಸುತ್ತುವರಿದು ದಾಳಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಧೈರ್ಯಗೆಡದ ಚಾಲಕ  ವಾಹನದಲ್ಲಿ ಅಡುಗೆಗೆ ಇಟ್ಟಿದ್ದ ಆಯುಧವನ್ನು ಕೈಯಲ್ಲಿ ಹಿಡಿದು ಅವರನ್ನು ಎದುರಿಸಲು ಮುಂದಾಗಿದ್ದಾರೆ. ಚಾಲಕನ ಧೈರ್ಯವನ್ನು ಕಂಡು ದರೋಡೆಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಅದೃಷ್ಟವಶಾತ್, ಕಳ್ಳರು ದೋಚಿದ ಬ್ಯಾಗ್‌ಗಳಲ್ಲಿ ಬಟ್ಟೆಗಳಿದ್ದವೇ ಹೊರತು ಯಾವುದೇ ನಗದು ಅಥವಾ ಚಿನ್ನಾಭರಣ ಇರಲಿಲ್ಲ. ಪ್ರಾಣಾಪಾಯದಿಂದ ಪಾರಾದ ಸಮಾಧಾನದಲ್ಲಿ ಕುಟುಂಬವು ದೂರು ನೀಡದೆ ಕುಮಟಾದತ್ತ ತಮ್ಮ ಪ್ರಯಾಣ ಮುಂದುವರಿಸಿದೆ.

ಪ್ರವಾಸಿಗರೇ ಎಚ್ಚರ…!

ಈ ಹೆದ್ದಾರಿಯಲ್ಲಿ ಇಂತಹ ಘಟನೆಗಳು ಹೊಸತೇನಲ್ಲ. ಈ ಹಿಂದೆ ಮೈಸೂರು ಮತ್ತು ಮಂಗಳೂರಿನಿಂದ ಬಂದ ಪ್ರವಾಸಿಗರಿಗೂ ಇದೇ ರೀತಿ ದರೋಡೆಯ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಸಂಚರಿಸುವ ಪ್ರವಾಸಿ ವಾಹನಗಳೇ ಇವರ ಗುರಿಯಾಗಿದ್ದು, ಅಪಘಾತವಾದಂತೆ ನಟಿಸಿ ವಾಹನ ನಿಲ್ಲಿಸಿ ಲೂಟಿ ಮಾಡುವುದು ಈ ಗ್ಯಾಂಗ್‌ನ ಕಾರ್ಯಶೈಲಿಯಾಗಿದೆ.

ಪ್ರಯಾಣಿಕರಿಗೆ ಎಚ್ಚರಿಕೆ:

ಶಿರಡಿ, ಅಯೋಧ್ಯೆ ಸೇರಿದಂತೆ ಉತ್ತರ ಭಾರತಕ್ಕೆ ಪ್ರವಾಸ ಹೋಗುವವರು, ವಿಶೇಷವಾಗಿ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52 ರ ಸೊಲ್ಲಾಪುರ ಭಾಗದಲ್ಲಿ ರಾತ್ರಿ ವೇಳೆ ಪ್ರಯಾಣಿಸುವಾಗ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅತ್ಯಗತ್ಯ:

 * ಸಾಧ್ಯವಾದಷ್ಟು ರಾತ್ರಿ ಪ್ರಯಾಣವನ್ನು ತಪ್ಪಿಸಿ.

 * ಅಪರಿಚಿತ ಸ್ಥಳಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಲ್ಲಿ ವಾಹನ ನಿಲ್ಲಿಸಬೇಡಿ.

 * ಯಾರಾದರೂ ಅಪಘಾತದ ನೆಪದಲ್ಲಿ ವಾಹನ ಅಡ್ಡಗಟ್ಟಿದರೆ, ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.

 * ಪ್ರಯಾಣದುದ್ದಕ್ಕೂ ವಾಹನದ ಬಾಗಿಲುಗಳನ್ನು ಲಾಕ್ ಮಾಡಿಕೊಳ್ಳಿ.

 * ಅನುಮಾನಾಸ್ಪದವಾಗಿ ಯಾರಾದರೂ ಹಿಂಬಾಲಿಸುತ್ತಿದ್ದರೆ, ವಾಹನದ ವೇಗ ಹೆಚ್ಚಿಸಿ ಜನನಿಬಿಡ ಪ್ರದೇಶದತ್ತ ಚಲಿಸಿ.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

4 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

10 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

13 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

15 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago