ಶಿಷ್ಟಾಚಾರ ಪಾಲನೆ ಮಾಡಿಲ್ಲವೆಂದು ಆರೋಪಿಸಿ ಶಾಸಕ ಧೀರಜ್ ಮುನಿರಾಜ್ ವಿರುದ್ಧ ಕಾಂಗ್ರೆಸ್ ಬೀದಿಗಿಳಿದು ಧರಣಿ: ಭುಗಿಲೆದ್ದ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ, ಡಿವೈಎಸ್ ಪಿ‌ ಕಚೇರಿ ಮುಂಭಾಗ ನೇಕಾರ ಮಳಿಗೆ ಕಾಮಗಾರಿ ಶಂಕುಸ್ಥಾಪನೆ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನೆರವೇರಲಿದೆ.

ಶಿಷ್ಟಾಚಾರ ಪಾಲನೆ ಮಾಡದೇ ನಮಗೆ ಆಹ್ವಾನವಿಲ್ಲವೆಂದು ಆರೋಪಿಸಿ ಇಂದು ಮಾಜಿ ಶಾಸಕ ಟಿ‌.ವೆಂಕಟರಮಣಯ್ಯ  ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ….

2019ರಲ್ಲಿ ಜಿಲ್ಲಾಧಿಕಾರಿಯಾಗಿದ್ದ ಕರಿಗೌಡ ಅವರು ದೊಡ್ಡಬಳ್ಳಾಪುರ ಬ್ರಾಂಡ್ ಸೀರೆ ಮಾಡಲು ನೇಕಾರರ ಸಭೆ ಕರೆದಿದ್ದರು. ನೇಕಾರ ಮಳಿಗೆ ಸ್ಥಾಪಿಸಲು ನೇಕಾರರು ಜಿಲ್ಲಾಧಿಕಾರಿ ಬಳಿ ಮನವಿ ಮಾಡಿದರು… ಆದ್ದರಿಂದ 6 ಜಾಗದಲ್ಲಿ ನೇಕಾರ ಮಳಿಗೆ ಸ್ಥಾಪನೆ ಮಾಡಲು ನಿರ್ಧರಿಸಲಾಯಿತು…

ಈ ಹಿನ್ನೆಲೆ ಇಂದು ನೇಕಾರ ಮಳಿಗೆ ಕಾಮಗಾರಿಗೆ ಇಂದು ಶಾಸಕ ಧೀರಜ್ ಮುನಿರಾಜ್ ಅವರಿಂದ ಶಂಕುಸ್ಥಾಪನೆ ಮಾಡಲು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಮಗೆ ಆಹ್ವಾನವನ್ನು ನೀಡಿದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಸರ್ವಾಧಿಕಾರಿ ಧೋರಣೆಯನ್ನು ಶಾಸಕ ಧೀರಜ್ ಮುನಿರಾಜ್ ತಾಳುತ್ತಿದ್ದಾರೆ ಎಂದು ಆರೋಪಿಸಿ ಇಂದು ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ….

ಧೀರಜ್ ಮುನಿರಾಜ್ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ…. ಇದರ ನಡುವೆ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆದಿದೆ….

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

1 hour ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

3 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

3 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

8 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

9 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

22 hours ago