ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆ ಎಚ್. ಮುನಿಯಪ್ಪ ರವರು ಮಾಧ್ಯಮಕ್ಕೆ ತಿಳಿಸಿದರು.

ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ IOC, HPC, BPC ಮತ್ತು GAIL ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಸರಬರಾಜಿನ ಸ್ಥಿತಿಗತಿ ಕುರಿತು ಮಹತ್ವದ ಸಭೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಒಂದು ದಿನಕ್ಕೆ 850 ಮೆಟ್ರಿಕ್ ಟನ್ ಗ್ಯಾಸ್ ಪೂರೈಕೆ ಆಗುತ್ತಿದ್ದು ಬಳಕೆಯ ಪ್ರಮಾಣ ಅಧಿಕವಾಗಿದೆ ಈ ಸಂದರ್ಭದಲ್ಲಿ ಮಿತವ್ಯಯವಾಗಿ ಬಳಸಲು ಗ್ರಾಹಕ ರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿ ಎಲ್‌ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (consumption) ಆಧಾರದ ಮೇಲೆ ಕೇಂದ್ರದಿಂದ ನಿರ್ಧರಿಸಲಾಗುತ್ತದೆ. ಸಿಲಿಂಡರ್ ಸರಬರಾಜು ಆಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ ಎಂದರು.

ಅತ್ಯಾವಶ್ಯಕ ಸೇವೆಗಳಾದ ಆಸ್ಪತ್ರೆಗಳು ಸೇರಿದಂತೆ ಹೋಟೆಲ್ ಹಾಗೂ ವ್ಯಾಪಾರಿಕ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ 25–30 ದಿನಗಳಿಗೆ ಒಂದು ಸಿಲಿಂಡರ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 45 ದಿನಗಳಿಗೆ ಒಂದು ಸಿಲಿಂಡರ್ ಬಳಕೆಯಾಗುತ್ತದೆ. ಇದಕ್ಕೆ ಅನುಗುಣವಾಗಿ ಸರಬರಾಜು ನಡೆಯುತ್ತಿದೆ ಎಂದರು.

ಜನರು ಪ್ಯಾನಿಕ್ ಆಗಬಾರದು, ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು ಹಾಗೂ ಸ್ಟಾಕ್ ಇಟ್ಟುಕೊಳ್ಳಬಾರದು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಿತ ಕಂಪನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್, ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಉಪಸ್ಥಿತರಿದ್ದರು

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

2 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

6 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

9 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

20 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago