ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧ- ಸಿಎಂ ಸಿದ್ದರಾಮಯ್ಯ

ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7,000 ರೂ. ದೊರೆಯುತ್ತಿದ್ದ ಸಂಬಳವನ್ನು 17,000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಗಿತ್ತು ಎಂದರು.

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದೆ ಇದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಪೂರೈಸುವುದಾಗಿ ಭರವಸೆ ನೀಡಿದ್ದೆ, ಅದನ್ನು ಇಂದು ಈಡೇರಿಸಲಾಗಿದೆ. ಇದರಿಂದ ಪೌರಕಾರ್ಮಿಕರ ವೇತನ 39,000 ರೂ.ಗಳು ಅವರ ಖಾತೆಗೆ ನೇರವಾಗಿ ಪಾವತಿಯಾಗಲಿದೆ ಎಂದು ಹೇಳಿದರು.

ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮ ಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದು ತಿಳಿಸಿದರು.

1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಮತ್ತವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರುತ್ತೇನೆ. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

14 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

15 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

20 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

21 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago